ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 100 ದಿನಗಳೊಳಗೆ ವಿವಿಧ ಸರಕಾರೀ ಸಂಸ್ಥೆಗಳಲ್ಲಿದ್ದುಕೊಂಡು ಆರೆಸ್ಸೆಸ್’ನೊಂದಿಗೆ ಸಂಬಂಧವಿಟ್ಟುಕೊಂಡಿರುವ ಪ್ರತಿಯೊಬ್ಬರನ್ನು ಸೇವೆಯಿಂದ ವಜಾಗೊಳಿಸಲಾಗುವುದು ಎಂದು ರಾಹುಲ್ ಗಾಂಧಿಯ ಆಪ್ತ ಹಾಗು ಕಾಂಗ್ರೆಸ್ ಮುಖಂಡ ಸ್ಯಾಮ್ ಪಿತ್ರೋಡ ಹೇಳಿದ್ದಾರೆ.
ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಂತೆ ಮೊದಲ ಆಧ್ಯತೆ ಸ್ವಚ್ಛಗೊಳಿಸುವಂಥದ್ದು. ಈ ಹಿನ್ನೆಲೆಯಲ್ಲಿ ಸರಕಾರೀ ಸಂಸ್ಥೆಗಳಲ್ಲಿರುವ ಆರೆಸ್ಸೆಸ್’ನವರನ್ನು ಗುರುತಿಸಿ ಹೊರಹಾಕಲಾಗುವುದು ಎಂದು ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಸ್ಯಾಮ್ ಪಿತ್ರೋಡ ಹೇಳಿಕೆ ನೀಡಿದ್ದಾರೆ.
ಮೋದಿ ಸರಕಾರವು ಸರಕಾರೀ ಸಂಸ್ಥೆಗಳಲ್ಲಿ ಆರೆಸ್ಸೆಸ್ ಹಿನ್ನೆಲೆಯುಳ್ಳವರಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಅವರು ಸರಕಾರೀ ಸೇವೆಗಳಲ್ಲಿ ಹಸ್ತಕ್ಷೇಪ ಮಾಡುತ್ತೀದ್ದಾರೆ ಎಂದ ಪಿತ್ರೋಡ, ಚಿಕಾಗೊ ಭಾರತೀಯ ರಾಯಭಾರೀ ಕಚೇರಿಯಲ್ಲಿ ಆರೆಸ್ಸೆಸ್ ಹಿನ್ನೆಲೆಯುಳ್ಳ ಒಬ್ಬ ಅಧಿಕಾರಿಯಿಂದಾಗಿ ಅಲ್ಲಿ ವಿದೇಶಾಂಗ ಸೇವೆಗೆ ಬಹಳಷ್ಟು ತೊಂದರೆ ಆಗುತ್ತಿದೆ ಎಂದು ಜನ ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ ಎಂದರು.