ಅಮೇಥಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಲಿಷ್ಠ ನಾಯಕನ ಕಣಕ್ಕಿಳಿಸಲು ತಯಾರಿ ನಡೆಸಿದ್ದ ಕಾಂಗ್ರೆಸ್ ಕೊನೆ ಕ್ಷಣದವರೆಗೂ ಅಭ್ಯರ್ಥಿ ಯಾರೆಂಬುದನ್ನ ಘೋಷಿಸಿರಲಿಲ್ಲ. ಈ ಕ್ಷೇತ್ರಕ್ಕೆ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರ ಪ್ರದೇಶ ಪಶ್ಚಿಮ ವಿಭಾಗದ ಉಸ್ತುವಾರಿಯಾಗಿ ನೇಮಕಗೊಂಡಿದ್ದ ಪ್ರಿಯಾಂಕ ಗಾಂಧಿ ವಾದ್ರಾ ಹೆಸರು ಕೇಳಿಬಂದಿತ್ತು. ಇದಕ್ಕೆ ಮೊದಲು ಸಮ್ಮತಿಯನ್ನೂ ಸೂಚಿಸಿದ್ದ ಪ್ರಿಯಾಂಕ, ಪಕ್ಷ ಒಪ್ಪಿದರೆ ಮೋದಿ ವಿರುದ್ಧ ಸ್ಪರ್ಧಿಸುವುದಾಗಿ ಹೇಳಿದ್ದರು.
ಆದರೆ ಕೊನೆ ಕ್ಷಣದಲ್ಲಿ ಪ್ರಿಯಾಂಕರ ಹೆಸರನ್ನ ಬಿಟ್ಟು ಅಜಯ್ ರಾಯ್ನನ್ನ ಕಾಂಗ್ರೆಸ್ ಕಣಕ್ಕಿಳಿಸಿತ್ತು. ಈ ಬದಲಾಣೆಯ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ, ನಾನಾಗಿಯೇ ಹಿಂದೆ ಸರಿದಿದಲ್ಲ ಇದು ಪಕ್ಷದ ತೀರ್ಮಾನ ಅಂತ ಹೇಳಿದ್ದಾರೆ. ನನ್ನ ಮೇಲೆ 41 ಕ್ಷೇತ್ರಗಳನ್ನ ನೋಡಿಕೊಳ್ಳುವ ಜವಾಬ್ದಾರಿ ಇದೆ. ಕೇವಲ ಒಂದೆ ಕ್ಷೇತ್ರಕ್ಕೆ ಸೀಮಿತವಾಗಬಾರದು ಅಂತ ಹಿರಿಯ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ರು.
ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಯಿತು ಎಂದಿದ್ದಾರೆ. ಉತ್ತರ ಪ್ರದೇಶದಲ್ಲಿ ಎಲ್ಲ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆ ಬರಬೇಕು ಅಂತ ಅಭ್ಯರ್ಥಿಗಳು ಬಯಸಿದ್ದರು. ಹೀಗಾಗಿ ಈ ನಿರ್ಧಾರಕ್ಕೆ ಬರಲಾಯಿತು ಎಂದಿದ್ದಾರೆ.