ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿಯನ್ನು ಮತ್ತೆ ತಬ್ಬಿಕೊಂಡ ರಾಹುಲ್ ಗಾಂಧಿ!

Pinterest LinkedIn Tumblr


ನವದೆಹಲಿ: ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಕುರಿತು ಪ್ರಧಾನಿ ನರೇಂದ್ರ ಮೋದಿ ಆಡಿದ ಮಾತುಗಳಿಗೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಧನ್ಯವಾದ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ‘ಮೋದಿ ಅವರೇ ನಿಮ್ಮ ಕರ್ಮ ನಿಮಗಾಗಿ ಕಾಯುತ್ತಿದೆ. ನಿಮ್ಮ ಬಗ್ಗೆ ನಿಮ್ಮ ಆತ್ಮಕ್ಕಿರುವ ಅಭಿಪ್ರಾಯವನ್ನು ನೀವು ಇಷ್ಟು ಸುಲಭವಾಗಿ ನನ್ನ ತಂದೆಗೆ ವರ್ಗಾಯಿಸಲಾರಿರಿ, ನಿಮಗೊಂದು ಬಿಗಿ ಅಪ್ಪುಗೆ..’ ಎಂದು ಕಾಲೆಳೆದಿದ್ದಾರೆ.

ಇನ್ನು ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಪ್ರಿಯಾಂಕಾ ಗಾಂಧಿ ಮತ್ತು ಪಿ. ಚಿದಂಬರಂ, ದೇಶದ ಪ್ರಧಾನಿ ಇಂತಹ ಮಾತುಗಳನ್ನಾಡುವುದು ಖೇದಕರ ಎಂದು ಆಕ್ರೋಶ ಹೊರಹಾಕಿದ್ದಾರೆ.

ರಫೆಲ್ ಒಪ್ಪಂದದಲ್ಲಿ ಹಗರಣ ನಡೆದಿದೆ ಎಂದು ಹೇಳುತ್ತಿರುವ ರಾಹುಲ್ ಗಾಂಧಿ ಅವರಿಗೆ ತಿರುಗೇಟು ನೀಡಿದ್ದ ಪ್ರಧಾನಿ ಮೋದಿ, ನಿಮ್ಮ ತಂದೆ ನಂ.1 ಭ್ರಷ್ಟಾಚಾರಿ ಎಂಬ ಹಣೆಪಟ್ಟಿ ಹೊತ್ತು ಜೀವನವನ್ನು ಅಂತ್ಯಗೊಳಿಸಿದರು ಎಂದು ಗುಡುಗಿದ್ದರು.

Comments are closed.