ರಾಷ್ಟ್ರೀಯ

ಮೋದಿ, ಅಮಿತ್ ಶಾರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ; ‘ಸುಪ್ರೀಂ’ನಲ್ಲಿ ಕಾಂಗ್ರೆಸ್ ಅರ್ಜಿ ವಜಾ

Pinterest LinkedIn Tumblr

ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ತುತ್ತಾಗಿದ್ದ ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾಗೆ ಕ್ಲೀನ್ ಚಿಟ್ ನೀಡಿದ್ದನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಚುನಾವಣಾ ಆಯೋಗದ ನಿರ್ಧಾರವನ್ನು ನಾನು ಪ್ರಶ್ನಿಸಲ್ಲ ಎಂದು ಹೇಳಿದೆ.

ಕಾಂಗ್ರೆಸ್ ಸಂಸದೆ ಸುಷ್ಮಿತಾ ದೇವಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ರಂಜನ್ ಗಗೋಯ್ ಮತ್ತು ದೀಪಕ್ ಗುಪ್ತಾ ನೇತೃತ್ವದ ದ್ವಿಸದಸ್ಯ ಪೀಠ, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ವಿಚಾರಣೆ ಚುನಾವಣಾ ಆಯೋಗದ ಕರ್ತವ್ಯವಾಗಿದ್ದು, ಅದರ ಕೆಲಸದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶ ಮಾಡುವುದಿಲ್ಲ. ಅಂತೆಯೇ ಚುನಾವಣಾ ಆಯೋಗದ ನಿರ್ಧಾರವನ್ನೂ ತಾನು ಪ್ರಶ್ನಿಸುವುದಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಇದಕ್ಕೂ ಮೊದಲು ಇದೇ ರೀತಿಯ ಅರ್ಜಿಗಳ ವಿಚಾರಣೆ ನಡೆಸಿದ್ದ ಪೀಠ ಎಲ್ಲ ಅರ್ಜಿಗಳಿಗೆ ಸಂಬಂಧಿಸದಂತೆ ದಾಖಲೆಗಳನ್ನು ಕೋರ್ಟ್ ಗೆ ನೀಡುವಂತೆ ಅರ್ಜಿದಾರರಿಗೆ ಸೂಚಿಸಿತ್ತು. ಈ ವೇಳೆ ಕಾಂಗ್ರೆಸ್ ಸಂಸದೆ ಸುಷ್ಮಿತಾ ದೇವಿ ಪರ ವಕಾಲತ್ತು ವಹಿಸಿದ್ದ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ಚುನಾವಣಾ ಆಯೋಗ ಸರಿಯಾದ ಸ್ಪಷ್ಟನೆ ನೀಡದಯೇ ಮೋದಿ ಮತ್ತು ಅಮಿತ್ ಶಾ ವಿರುದ್ಧ ದಾಖಲಾದ ಎಲ್ಲ ಅರ್ಜಿಗಳನ್ನು ವಜಾಗೊಳಿಸುತ್ತಿದೆ. ಹೀಗಾಗಿ ಈ ಸಂಬಂಧ ಸೂಕ್ತ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ್ದರು.

Comments are closed.