ರಾಷ್ಟ್ರೀಯ

ಗುರುಗ್ರಾಮದಲ್ಲಿ ಸರತಿ ಸಾಲಲ್ಲಿ ನಿಂತು ಮತದಾನ ಮಾಡಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ

Pinterest LinkedIn Tumblr

ನವದೆಹಲಿ: ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 6ನೇ ಹಂತದ ಮತದಾನ ಬಿರುಸಿನಿಂದ ಸಾಗಿದ್ದು, ಗುರುಗ್ರಾಮದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸರತಿ ಸಾಲಲ್ಲಿ ನಿಂತು ಮತದಾನ ಮಾಡುವ ಮೂಲಕ ಗಮನ ಸೆಳೆದರು.

ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಭಾನುವಾರ ಹರ್ಯಾಣದ ಗುರುಗ್ರಾಮದಲ್ಲಿರುವ ಮತಗಟ್ಟೆಗೆ ತೆರಳಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಇದೇ ವೇಳೆ, ಪೂರ್ವ ದೆಹಲಿಯ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ದೆಹಲಿಯ ಹಳೆ ರಾಜಿಂದರ್ ನಗರದಲ್ಲಿರುವ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.

ಇನ್ನು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ದೆಹಲಿಯ ಔರಂಗಜೇಬ್ ಲೇನ್ ನಲ್ಲಿನ ಎನ್ ಪಿ ಸೀನಿಯರ್ ಸೆಕೆಂಡರಿ ಶಾಲೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಇದೇ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ತಮ್ಮ ಹಕ್ಕು ಚಲಾಯಿಸಿದ್ದು, ಪೂರ್ವ ದೆಹಲಿ ಕ್ಷೇತ್ರದ ಆಪ್ ಅಭ್ಯರ್ಥಿ ಅತಿಶಿ ಅವರು ಜಂಗ್ ಪುರದಲ್ಲಿನ ಕಮಲಾ ನೆಹರು ಸರ್ಕಾರಿ ಸರ್ವೋದಯ ವಿದ್ಯಾಲಯದಲ್ಲಿ ಮತದಾನ ಮಾಡಿದರು.

ಅಂತೆಯೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸಿವಿಲ್ ಲೈನ್ ನಲ್ಲಿನ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.

Comments are closed.