ರಾಷ್ಟ್ರೀಯ

ಎನ್‌ಡಿಎ 348, ಯುಪಿಎ 86 , ಇತರರು 107 ಕ್ಷೇತ್ರಗಳಲ್ಲಿ ಮುನ್ನಡೆ; ಕರ್ನಾಟಕದಲ್ಲೂ ಬಿಜೆಪಿ 24 ಕ್ಷೇತ್ರಗಳಲ್ಲಿ ಮುನ್ನಡೆ

Pinterest LinkedIn Tumblr

ಹೊಸದಿಲ್ಲಿ: ದೇಶದ 542 ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ತಾಜಾ ಟ್ರೆಂಡ್ ಪ್ರಕಾರ ಎನ್‌ಡಿಎ 348, ಯುಪಿಎ 86 ಹಾಗೂ ಇತರರು 107 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕರ್ನಾಟಕದಲ್ಲೂ ಬಿಜೆಪಿ 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಬಿಹಾರದ ಪಟ್ನಾಸಾಹಿಬ್ ಕ್ಷೇತ್ರದಲ್ಲಿ ಬಿಜೆಪಿಯ ರವಿಶಂಕರ್ ಪ್ರಸಾದ್ ಕಾಂಗ್ರೆಸ್‌ನ ಶತ್ರುಘ್ನ ಸಿನ್ಹಾಗಿಂತ 1,33,959 ಮತಗಳಿಂದ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗುಜರಾತ್‌ನ ಗಾಂಧಿನಗರದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಬಹುತೇಕ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ.

ಚುನಾವಣೆ ಆಯೋಗದ ಮಾಹಿತಿ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ 24, ಬಿಜೆಪಿ 17, ಕಾಂಗ್ರೆಸ್ 1 ಕ್ಷೇತ್ರದಲ್ಲಿ ಮುನ್ನಡೆ

ಬಿಜೆಪಿ ಸಂಸದೀಯ ಪಕ್ಷದ ಸಭೆ ಇಂದು ಸಂಜೆ ನಡೆಯಲಿದೆ. ಸಂಜೆ 5:30ಕ್ಕೆ ಪ್ರಧಾನಿ ಮೋದಿ ಅವರು ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ.

ತಾಜಾ ಟ್ರೆಂಡ್ ಪ್ರಕಾರ, ಭೋಪಾಲ್‌ನಲ್ಲಿ ಬಿಜೆಪಿಯ ಸಾಧ್ವಿ ಪ್ರಜ್ಞಾ ಸಿಂಗ್ 40,000 ಮತಗಳ ಮುನ್ನಡೆ. ಅಮೇಠಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ಎದುರು ರಾಹುಲ್ ಗಾಂಧಿ 4,000ಕ್ಕೂ ಅಧಿಕ ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ. ಆದರೆ ವಯನಾಡಲ್ಲಿ 1,20,000ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ದಿಲ್ಲಿಯ ಎಲ್ಲ 7 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ: ದಿಲ್ಲಿಯಲ್ಲಿ ಬಿಜೆಪಿ ಮತಗಳಿಕೆ ಪ್ರಮಾಣ ಶೇ 57.6ಕ್ಕೆ ಏರಿಕೆ.

ಟ್ರೆಂಡ್‌ಗಳ ಪ್ರಕಾರ ದಿಲ್ಲಿ, ರಾಜಸ್ಥಾನ, ಹರ್ಯಾಣ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಉತ್ತರಾಖಂಡ್‌- ಈ ಆರು ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌. ವಯನಾಡಿನಲ್ಲಿ ರಾಹುಲ್‌ಗೆ ಭಾರೀ ಮುನ್ನಡೆ.

‘ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಪ್ರತಿಪಕ್ಷ ಮುನ್ನಡೆ ಸಾಧಿಸಿರುವುದು ದೇಶದ ಇತಿಹಾಸದಲ್ಲೇ ಮೊದಲು ‘ ರಾಜಸ್ಥಾನದ ಬಿಜೆಪಿ ಅಧ್ಯಕ್ಷ ಮದನ್ ಲಾಲ್‌ ಸೈನಿ ಹೇಳಿದರು. ರಾಜಸ್ಥಾನದ ಎಲ್ಲ 25 ಕ್ಷೇತ್ರಗಳಲ್ಲೂ ಬಿಜೆಪಿ ಮುನ್ನಡೆಯಲ್ಲಿದೆ.

ಪಶ್ಚಿಮ ಬಂಗಾಳದ ಅಸನ್‌ಸೋಲ್‌ ಕ್ಷೇತ್ರದಲ್ಲಿ ಬಿಜೆಪಿಯ ಬಾಬುಲ್ ಸುಪ್ರಿಯೊ ಮುನ್ನಡೆ. ಡೈಮಂಡ್ ಹಾರ್ಬರ್‌ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅಳಿಯನಿಗೆ ಹಿನ್ನಡೆ. ಉತ್ತರ ಪ್ರದೇಶದ ಉನ್ನಾವೊ ಕ್ಷೇತ್ರದಲ್ಲಿ ಬಿಜೆಪಿಯ ಸಾಕ್ಷಿ ಮಹಾರಾಜ್‌ಗೆ 20,000 ಮತಗಳ ಮುನ್ನಡೆ. ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿಕೂಟ 29 ಕ್ಷೇತ್ರಗಳಲ್ಲಿ ಮುನ್ನಡೆ, ಕಾಂಗ್ರೆಸ್-ಆರ್‌ಜೆಡಿ 9 ಸೀಟುಗಳಲ್ಲಿ ಮುನ್ನಡೆ.

ಕೇರಳದಲ್ಲಿ ಯುಡಿಎಫ್‌ ಮುನ್ನಡೆ. ತಮಿಳುನಾಡಿನ 29 ಕ್ಷೇತ್ರಗಳಲ್ಲಿ ಡಿಎಂಕೆ ಮುನ್ನಡೆ. ಟ್ರೆಂಡ್‌ ಪ್ರಕಾರ, ತೆಲಂಗಾಣದಲ್ಲಿ ಟಿಆರ್‌ಎಸ್‌ ಹೆಚ್ಚು ಸ್ಥಾನಗಳನ್ನು ಗಳಿಸುವ ನಿರೀಕ್ಷೆ. ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ವೈಎಸ್ಸಾರ್ ಕಾಂಗ್ರೆಸ್‌ ಬಹುಮತ ಸಾಧಿಸುವ ಸಾಧ್ಯತೆ ದಟ್ಟವಾಗಿದೆ. ಲೋಕಸಭಾ ಕ್ಷೇತ್ರಗಳಲ್ಲಿ ಜಗನ್ ನೇತೃತ್ವದ ಪಕ್ಷಕ್ಕೆ ಟಿಡಿಪಿ ಪ್ರಬಲ ಪೈಪೋಟಿ ನೀಡುತ್ತಿದೆ.

ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುನ್ನಡೆ. ಗಾಂಧಿನಗರದಲ್ಲಿ ಅಮಿತ್‌ ಶಾ 25,000 ಮತಗಳಿಂದ ಮುನ್ನಡೆ. ಅಮೇಠಿಯಲ್ಲಿ ಸ್ಮೃತಿ ಇರಾನಿ 2,000 ಮತಗಳ ಮುನ್ನಡೆ. ಪಶ್ಚಿಮ ದಿಲ್ಲಿ ಕ್ಷೇತ್ರದಲ್ಲಿ ಬಿಜೆಪಿ 4,000ಕ್ಕೂ ಅಧಿಕ ಮತಗಳ ಮುನ್ನಡೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಿಜೆಪಿಯ ಸಾಧ್ವಿ ಪ್ರಜ್ಞಾ ಸಿಂಗ್ ಮುನ್ನಡೆ.

ತೆಲಂಗಾಣದಲ್ಲಿ ಟಿಆರ್‌ಎಸ್‌ 2, ಬಿಜೆಪಿ 2, ಕಾಂಗ್ರೆಸ್ 1ರಲ್ಲಿ ಮುನ್ನಡೆ. ಗುಜರಾತ್‌ನ 26 ಕ್ಷೇತ್ರಗಳ ಪೈಕಿ 13ರಲ್ಲಿ ಬಿಜೆಪಿ, 1ರಲ್ಲಿ ಕಾಂಗ್ರೆಸ್ ಮುನ್ನಡೆ. ಉತ್ತರ ಪ್ರದೇಶದಲ್ಲಿ ಬಿಜೆಪಿ 18, ಎಸ್‌ಪಿ-ಬಿಎಸ್ಪಿ ಮೈತ್ರಿಕೂಟ 7 ಕ್ಷೇತ್ರಗಳಲ್ಲಿ ಮುನ್ನಡೆ.

Comments are closed.