ರಾಷ್ಟ್ರೀಯ

2ನೇ ಅವಧಿಗೆ ಪ್ರಧಾನಿಯಾಗಿ ಮೋದಿ ಮೇ 30ರಂದು ಪ್ರಮಾಣ ವಚನ ಸ್ವೀಕಾರ

Pinterest LinkedIn Tumblr


ನವದೆಹಲಿ: ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಪ್ರಧಾನಿಯಾಗಿ ಮೇ 30 (ಗುರುವಾರ)ರಂದು ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಭಾನುವಾರ ರಾಷ್ಟ್ರಪತಿ ಭವನ ತಿಳಿಸಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ಅಂದು ಸಂಜೆ 7 ಗಂಟೆಗೆ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಕೇಂದ್ರ ಸಚಿವರು ಪ್ರಮಾಣ ವಚನ ಪಡೆಯಲಿದ್ದಾರೆ ಎಂದು ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರು ಎನ್​ಡಿಎ ನಾಯಕರಾಗಿ ಶನಿವಾರ ಸಂವಿಧಾನಬದ್ಧವಾಗಿ ಆಯ್ಕೆಯಾಗಿದ್ದರು.

Comments are closed.