ರಾಷ್ಟ್ರೀಯ

ಸತತ ಎರಡನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ

Pinterest LinkedIn Tumblr

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿರುವ ನರೇಂದ್ರ ಮೋದಿ ಅವರು ಗುರುವಾರ ಸತತ ಎರಡನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್ ಡಿಎ ಸಂಸದೀಯ ಮಂಡಳಿಯ ನಾಯಕ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಎನ್‌ಡಿಎ ಸರಕಾರದ ವೈಸ್‌ ಕ್ಯಾಪ್ಟನ್‌ ಆಗಿರುವ ರಾಜನಾಥ್‌ ಸಿಂಗ್‌ ಎರಡನೆಯವರಾಗಿ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಅಮಿತ್‌ ಅನಿಲ್‌ಚಂದ್ರ ಶಾ, ನಿತಿನ್‌ ಜಯರಾಮ್‌ ಗಡ್ಕರಿ, ನಂತರ ಕರ್ನಾಟಕದ ಡಿ.ವಿ. ಸದಾನಂದ ಗೌಡ ಪ್ರಮಾಣ ವಚನ ಸ್ವೀಕರಿಸಿದರು.

ನಂತರ ನಿರ್ಮಲಾ ಸೀತಾರಾಮನ್‌, ರಾಮ್‌ ವಿಲಾಸ್‌ ಪಾಸ್ವಾನ್‌, ನರೇಂದ್ರ ಸಿಂಗ್‌ ತೋಮರ್‌, ರವಿಶಂಕರ್‌ ಪ್ರಸಾದ್‌, ಹರ್‌ಸಿಮ್ರತ್‌ ಕೌರ್‌ ಬಾದಲ್‌, ತಾವರ್‌ಚಂದ್‌ ಗೆಹ್ಲೋಟ್‌, ಸುಬ್ರಮಣ್ಯಯಂ ಜೈ ಶಂಕರ್‌, ಸ್ಮೃತಿ ಇರಾನಿ, ಪ್ರಕಾಶ್ ಜಾವಡೇಕರ್, ಧರ್ಮೇಂದ್ರ ಪ್ರಧಾನ್, ಮುಕ್ತರ್ ಅಬ್ಬಾಸ್ ನಖ್ವಿ, ಪ್ರಹ್ಲಾದ್ ಜೋಶಿ ಪ್ರಮಾಣ ವಚನ ಸ್ವೀಕರಿಸಿದರು.

ಎನ್‌ಡಿಎ ಸರಕಾರದ ಬಹುನಿರೀಕ್ಷೆಯ ದ್ವಿತೀಯ ಅವಧಿಗೆ ಚಾಲನೆ ದೊರೆಯಲಿದೆ. ರಾಷ್ಟ್ರಪತಿ ಭವನದ ಎದುರಿನ ಅಂಗಳದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅವರು ಎರಡನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಸಂಭ್ರಮ
ಮೋದಿ ಅವರೊಂದಿಗೆ ಬಿಜೆಪಿ ಮತ್ತು ಮಿತ್ರ ಕೂಟದ 60ಕ್ಕೂ ಅಧಿಕ ಸಚಿವರು ಪ್ರತಿಜ್ಞೆ ಸ್ವೀಕರಿಸುವ ನಿರೀಕ್ಷೆ ಇದೆ. ಬಿಮ್‌ಸ್ಟೆಕ್‌ ದೇಶಗಳ ಮುಖ್ಯಸ್ಥರು ಸೇರಿದಂತೆ ಹಲವು ವಿದೇಶಿ ಗಣ್ಯರು, ರಾಜ್ಯಗಳ ಸಿಎಂಗಳು, ರಾಜ್ಯಪಾಲರು, ಪ್ರತಿಪಕ್ಷ ಮುಖಂಡರು, ಮಾಜಿ ಪ್ರಧಾನಿಗಳು, ಮಾಜಿ ರಾಷ್ಟ್ರಪತಿಗಳು, 100 ಮಂದಿ ಅನಿವಾಸಿ ಭಾರತೀಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ. ಒಟ್ಟು 6000ಕ್ಕೂ ಹೆಚ್ಚು ಗಣ್ಯರಿಗಾಗಿ ವ್ಯವಸ್ಥೆಗಳನ್ನು ಮಾಡಲಾಗಿದೆ.

ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು, ಮಾಜಿ ರಾಷ್ಟ್ರಪತಿಗಳಾದ ಪ್ರತಿಭಾ ಪಾಟೀಲ್‌, ಬಿಜೆಪಿ ವರಿಷ್ಠ ನಾಯಕ ಎಲ್‌.ಕೆ. ಆಡ್ವಾಣಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌, ಮುರಳಿ ಮನೋಹರ್‌ ಜೋಶಿ, ಯೋಗಿ ಆದಿತ್ಯನಾಥ್‌, ಸುಷ್ಮಾ ಸ್ವರಾಜ್‌ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಯುಪಿಎ ಅಧ್ಯಕ್ಷ ಸೋನಿಯಾ ಗಾಂಧಿ, ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ, ರಾಮ್‌ಮಾಧವ್‌, ಸದ್ಬುರು ಜಗ್ಗಿ, ಉದ್ಯಮಿ ಮುಖೇಶ್‌ ಅಂಬಾನಿ, ನೀತು ಅಂಬಾನಿ, ಜೆಆರ್‌ಡಿ ಟಾಟಾ, ರಜನಿಕಾಂತ್‌, ಆಶಾಭೋಂಸ್ಲೆ, ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದಾರೆ. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬ ಸದಸ್ಯರು ಕೂಡ ರಾಷ್ಟ್ರಪತಿ ಭವನದಲ್ಲಿ ಹಾಜರಾಗಿ ಪ್ರಮಾಣ ವಚನಕ್ಕೆ ಸಾಕ್ಷಿಯಾಗಿದ್ದಾರೆ.

ರಾಜ್ಯದ ಗಣ್ಯರು
ಪೇಜಾವರ ಶ್ರೀ, ಆದಿಚುಂಚನಗಿರಿ ಶ್ರೀಗಳಾದ ನಿರ್ಮಲಾನಂದ ಸ್ವಾಮೀಜಿ, ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ಈ ನಡುವೆ ಸಂಪುಟದಲ್ಲಿ ಕೇವಲ ಒಂದೇ ಒಂದು ಸ್ಥಾನ ನೀಡಿರುವುದಕ್ಕೆ ಮುನಿಸಿಕೊಂಡಿದ್ದಾರೆ ಜೆಡಿಯು ನಾಯಕ ನಿತೀಶ್‌ ಕುಮಾರ್‌. ಆದರೂ ಪ್ರಮಾಣ ವಚನ ಸಮಾರಂಭಕ್ಕೆ ಹಾಜರಾಗಿದ್ದಾರೆ.

ಈ ನಡುವೆ ಸಂಸತ್‌ ಭವನಕ್ಕೆ ಗುರುವಾರ ಆಗಮಿಸಿದ ಕಲಬುರಗಿ ಸಂಸದ ಡಾ. ಉಮೇಶ್‌ ಜಾಧವ್‌ ದೀರ್ಘದಂಡ ನಮಸ್ಕಾರ ಮಾಡಿ ಪ್ರವೇಶ ಮಾಡಿದರು.

ಇಡೀ ರಾಷ್ಟ್ರಪತಿ ಭವನದ ಸುತ್ತಮುತ್ತ ಖಾಕಿ ಭದ್ರಕೋಟೆಯೇ ನಿರ್ಮಾಣವಾಗಿದೆ. 10 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Comments are closed.