ಚೆನ್ನೈ: ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರದಡಿ ಹಿಂದಿ ಕಡ್ಡಾಯಗೊಳಿಸಲು ಹೋಗಿ ವಿವಾದಕ್ಕಿಡಾದ ಬೆನ್ನಲ್ಲೇ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ತಮಿಳು ಐಚ್ಛಿಕ ಭಾಷೆಯಾಗಿ ಕಲಿಯಲು ಅವಕಾಶ ಮಾಡಿಕೊಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪಳನಿಸ್ವಾನಿ, ತಮಿಳುನಾಡನ್ನು ಹೊರತುಪಡಿಸಿ ಇತರೆ ರಾಜ್ಯಗಳ ಪಠ್ಯದ ಆಯ್ಕೆಯಲ್ಲಿ ತಮಿಳು ಭಾಷೆಗೆ ಆದ್ಯತೆ ಕೊಡಬೇಕು ಎಂದು ಹೇಳಿದ್ದಾರೆ.
ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಜೀಯವರೇ ಇತರೆ ರಾಜ್ಯಗಳಲ್ಲೂ ತಮಿಳು ಐಚ್ಛಿಕ ಭಾಷೆಯಾಗಿ ಕಲಿಯಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಈ ಮೂಲಕ ಜಗತ್ತಿನ ಅತ್ಯಂತ ಪ್ರಾಚೀನ ಭಾಷೆಯ ಕಲಿಕೆಗೆ ಅವಕಾಶ ಮಾಡಿಕೊಟ್ಟರೆ ಇದೊಂದು ದೊಡ್ಡ ಸೇವೆಯಾಗಲಿದೆ ಎಂದು ಪಳನಿಸ್ವಾಮಿ ಟ್ವೀಟ್ ಮಾಡಿದ್ದಾರೆ.