ರಾಷ್ಟ್ರೀಯ

ಇಂದು ಕೇರಳಕ್ಕೆ ಮುಂಗಾರು ಪ್ರವೇಶ: ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ

Pinterest LinkedIn Tumblr


ನವದೆಹಲಿ: ಕೇರಳಕ್ಕೆ ಶೀಘ್ರದಲ್ಲೇ ಮುಂಗಾರು ಪ್ರವೇಶಿಸಲಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಯಾವುದೇ ಅನಾಹುತ ಸಂಭವಿಸಿದಂತೇ ಈಗಾಗಲೇ ತೀವ್ರ ಕಟ್ಟೆಚ್ಚರ ವಹಿಸಿದೆ. ಪ್ರಮುಖವಾಗಿ ಮಳೆ ಬಂದಾಗ ಭೂಕುಸಿತ ಉಂಟಾಗುವ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತೀವ್ರ ಮಳೆಯಾಗಿ ನೆರೆ ಉಂಟಾಗುವ ಕಡೆಯೂ ಎಚ್ಚರಿಕೆ ವಹಿಸುವಂತೆ ಕೇರಳ ಸರ್ಕಾರ ಪೊಲೀಸರಿಗೆ ಆದೇಶ ಹೊರಡಿಸಿದೆ.

ಈಗಾಗಲೇ ಮುಂಗಾರು ಪ್ರವೇಶ ಆಗಿದೆ. ತೀವ್ರ ಮಳೆ ಬಂದಲ್ಲಿ ಭೂಕುಸಿತ ಉಂಟಾಗುವ ಇಲ್ಲಿನ ಕೊಲ್ಲಂ ಸೇರಿದಂತೆ ನೆರೆಯ ಏಳು ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಆದೇಶಿಸಲಾಗಿದೆ. ಅಲ್ಲದೇ ಮುಂಗಾರು ಮಳೆ ಆರಂಭಕ್ಕೆ ಮುನ್ನವೇ ಎಚ್ಚೆತ್ತ ಕೇರಳ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಇನ್ನು ಜೂನ್ 10ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶಿಸುವ ನಿರೀಕ್ಷೆ ಇದೆ. ಈ ಬೆನ್ನಲ್ಲೇ ಕರ್ನಾಟಕದಲ್ಲಿ ಜೂನ್ 12 ರಂದು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈಗಾಗಲೇ ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಲ್ಲಿನ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ಗಾಳಿಯ ಒತ್ತಡ ಕಡಿಮೆಯಿದೆ. ಇದರೊಂದಿಗೆ ಮುಂಗಾರು ಪ್ರವೇಶಿಸಲು ಅಗತ್ಯ ವಾತಾವರಣ ನಿರ್ಮಾಣವಾಗಿದೆ. ಹಾಗಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ಕೋಲಾರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆ ಯಲಿದೆ. ರಾಜ್ಯದ ಬಹುತೇಕ ಕಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

Comments are closed.