ರಾಷ್ಟ್ರೀಯ

ಪಶ್ಚಿಮ ಬಂಗಾಳ; ಟಿಎಂಸಿ-ಬಿಜೆಪಿ ನಡುವೆ ಮತ್ತೆ ಘರ್ಷಣೆ, ಮೂವರು ಬಲಿ

Pinterest LinkedIn Tumblr


ಕೋಲ್ಕತ್ತಾ (ಜೂ 9): ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್​ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆಯುತ್ತಿರುವ ಘರ್ಷಣೆ ಪೂರ್ಣಗೊಳ್ಳುವ ಲಕ್ಷಣ ಗೋಚರವಾಗುತ್ತಿಲ್ಲ. ಶನಿವಾರ ಸಂಜೆ ಮತ್ತೆ ಹಿಂಸಾಚಾರ ನಡೆದಿದ್ದು, ಓರ್ವ ಟಿಎಂಸಿ ಹಾಗೂ ಇಬ್ಬರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದಾರೆ.

24 ಪರ್ಗಣಾಸ್​ ಜಿಲ್ಲೆಯ ನಜ್ಯಾತ್​ನಲ್ಲಿ ಟಿಎಂಸಿ-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟಿದೆ. ಸಾರ್ವಜನಿಕ ಪ್ರದೇಶದಲ್ಲಿದ್ದ ಪಕ್ಷದ ಬಾವುಟ ಕೆಳಗಿಳಿಸಿದ ವಿಚಾರಕ್ಕೆ ಸಂಬಂಧಿಸಿ ಟಿಎಂಸಿ-ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಜಟಾಪಟಿ ನಡೆದಿತ್ತು. ನಂತರ ಅದು ಹಿಂಸಾಚಾರಕ್ಕೆ ತಿರುಗಿದೆ.

ಪೊಲೀಸ್​ ಪಡೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸು ಪ್ರಯತ್ನಿಸಿದ್ದಾರೆ. ಈ ಭಾಗದಲ್ಲಿ ಮತ್ತೆ ಹಿಂಸಾಚಾರ ಸಂಭವಿಸುವ ಲಕ್ಷಣ ಗೋಚರವಾಗಿದ್ದು, ಹೆಚ್ಚಿನ ಪೊಲೀಸ್​ ಪಡೆ ನಿಯೋಜನೆ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿ ಅಮಿತ್​ ಶಾ ವರದಿ ತರಿಸಿಕೊಂಡಿದ್ದಾರೆ.

ಪಶ್ಚಿಮ ಬಂಗಾಳ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನ ಗಳಿಸುವು ಮೂಲಕ ಇತಿಹಾಸ ನಿರ್ಮಿಸಿತ್ತು. ಇದು ಟಿಎಂಸಿ ಅಸಮಾಧಾನಕ್ಕೆ ಕಾರಣವಾಗಿತ್ತು. ಹಾಗಾಗಿ ಚುನಾವಣಾ ಫಲಿತಾಂಶದ ನಂತರ ನಿರಂತವಾಗಿ ಘರ್ಷಣೆಗಳು ನಡೆಯುತ್ತಲೇ ಇವೆ.

Comments are closed.