ರಾಷ್ಟ್ರೀಯ

ಬಿಜೆಪಿ ನಾಯಕರಿಗೆ ಪಶ್ಚಿಮ ಬಂಗಾಳ ಮತ್ತು ಕೇರಳದ ಕಡೆ ಗಮನ ಹರಿಸಲು ಅಮಿತ್​​ ಶಾ ಸೂಚನೆ

Pinterest LinkedIn Tumblr


ನವದೆಹಲಿ(ಜೂನ್​​.14): ಇತ್ತೀಚೆಗಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯೂ ಭರ್ಜರಿ ಜಯಭೇರಿ ಬಾರಿಸಿದೆ. ಕೇಂದ್ರದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೇರಿದ ಎನ್​​ಡಿಎ ಸರ್ಕಾರ 2019-20ರ ಸಾಲಿನ ಪೂರ್ಣಪ್ರಮಾಣದ ಬಜೆಟ್​​ ಮಂಡನೆಗೂ ತಯಾರಿ ನಡೆಸಿಕೊಳ್ಳುತ್ತಿದೆ. ಈ ಮಧ್ಯೆ ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಮುಂದಿನ ದಿನಗಳಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಮುಖಂಡರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​​ ಶಾ ಅವರು ಖಡಕ್ ​​ಸೂಚನೆ ನೀಡಿದ್ದಾರೆ.

ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಪಕ್ಷ ಬಲವರ್ಧನೆ ಮಾಡಬೇಕು. ಹೊಸ ಸದಸ್ಯತ್ವ ನೋಂದಣಿ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಬಿಜೆಪಿ ಮುಖಂಡರಿಗೆ ಅಮಿತ್​​ ಶಾ ಅವರು ತಾಖೀತು ಮಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯ ಘಟಕದ ಮುಖ್ಯಸ್ಥರು ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ.

ಇನ್ನು ದಿನೇದಿನೇ ದೇಶದಲ್ಲಿ ಬಿಜೆಪಿ ಬಲಗೊಂಡಿದೆ. ಪ್ರಮುಖವಾಗಿ ಪಶ್ಚಿಮ ಬಂಗಾಳ, ಒಡಿಶಾ, ತೆಲಂಗಾಣದಂತಹ ರಾಜ್ಯಗಳಲ್ಲಿ ತನ್ನದೇ ವರ್ಚಸ್ಸು ಬೆಳೆಸಿಕೊಂಡಿದೆ. 2014ರಲ್ಲಿ ಉತ್ತಮ ಫಲಿತಾಂಶ ನೀಡಿದ್ದ ರಾಜ್ಯಗಳಲ್ಲಿ ತನ್ನ ಪ್ರಾಬಲ್ಯ ಮುಂದುವರಿಸಿದೆ. ಇದೇ ರೀತಿ ಮುಂದಿನ ವರ್ಷಗಳಲ್ಲಿ ಹೊಸ ರಾಜ್ಯಗಳಲ್ಲಿಯೂ ಪಕ್ಷವನ್ನು ವಿಸ್ತರಿಸಬೇಕು ಎಂದು ಸಭೆಯಲ್ಲಿ ಆದೇಶಿಸಲಾಗಿದೆ.

ಅಂತೆಯೇ ಉತ್ತರ ಭಾರತದಲ್ಲಿ ವಿಜಯ ಪತಾಕೆ ಹಾರಿಸಿಕೊಂಡು ಬರುತ್ತಿರುವ ಬಿಜೆಪಿ ಕಣ್ಣು ಸದ್ಯ ದಕ್ಷಿಣ ಭಾರತ ಮೇಲೆ ನೆಟ್ಟಿದೆ. ಕರ್ನಾಟಕದ ಲೋಕಸಭಾ ಚುನಾವಣೆಯಲ್ಲಿ 23 ಸೀಟು ಗೆದ್ದ ಅಮಿತ್​​ ಶಾ ಪಡೆ, ತಮಿಳು ನಾಡು ಮತ್ತು ಆಂಧ್ರ-ತೆಲಂಗಾಣದಲ್ಲಿಯೂ ಸಂಘಟನೆ ಮಾಡಬೇಕೆಂದು ನಿರ್ಧರಿಸಿದೆ.

ವರ್ಷಾಂತ್ಯಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆ ಗೆಲ್ಲಲು ಮುಂದಾಗಿರುವ ಬಿಜೆಪಿ, ಮತದಾರರ ನಾಡಿಮಿಡಿತ ಅರ್ಥೈಸಿಕೊಳ್ಳಲು ಕೆಲಸ ಮಾಡುತ್ತಿದೆ. ಇದಕ್ಕಾಗಿಯೇ ಒಂದು ತಂಡವನ್ನು ರಚಿಸಲಾಗಿದೆ. ಈ ತಂಡ ಜನರ ನಾಡಿ ಮಿಡಿತ ಅರಿತು, ಅದಕ್ಕೆ ತಕ್ಕಂತೆ ಯೋಜನೆಗಳನ್ನು ರೂಪಿಸಲು ಸಿದ್ಧತೆ ನಡೆಸಿಕೊಳ್ಳುತ್ತಿದೆ.

Comments are closed.