ರಾಷ್ಟ್ರೀಯ

ಉತ್ತರ ಪ್ರದೇಶ: ಮದುವೆಯಿಂದ ಹಿಂದಿರುಗುತ್ತಿದ್ದ ವಾಹನ ಕಾಲುವೆಗೆ ಬಿದ್ದು 7 ಮಂದಿ ಮಕ್ಕಳ ದುರ್ಮರಣ

Pinterest LinkedIn Tumblr

ಲಕ್ನೋ: ವಾಹನವೊಂದು ಕಾಲುವೆಗೆ ಬಿದ್ದ ಪರಿಣಾಮ ಏಳು ಮಂದಿ ಮಕ್ಕಳು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಗರದಲ್ಲಿ ನಡೆದಿದೆ.

ಲಖನೌನ ನಗ್ರಾಮ್ ನಲ್ಲಿರುವ ನಾಲೆಯಲ್ಲಿ ಈ ದುರಂತ ಸಂಭವಿಸಿದ್ದು, ವ್ಯಾನ್ ನಲ್ಲಿ 29 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಪೊಲೀಸ್ ಮೂಲಗಳು ತಿಳಿಸಿರುವಂತೆ ಎಲ್ಲ ಪ್ರಯಾಣಿಕರೂ ಮದುವೆ ಸಮಾರಂಭ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದರು ಎಂದು ತಿಳಿದುಬಂದಿದೆ. ಮುಂಜಾನೆ ಸುಮಾರು 3 ಗಂಟೆ ಸಂದರ್ಭದಲ್ಲಿ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿದ ವ್ಯಾನ್ ನಾಲೆಗೆ ಬಿದ್ದಿದೆ.

ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಎನ್ ಡಿಆರ್ ಎಫ್ ತಂಡ 22 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಆದರೆ 7 ಮಂದಿ ಮಕ್ಕಳು ಮಾತ್ರ ಪತ್ತೆಯಾಗಿಲ್ಲ. ನಾಪತ್ತೆಯಾದ ಮಕ್ಕಳ ಪತ್ತೆಗೆ ಮುಳುಗು ತಜ್ಞರನ್ನು ಕೂಡ ನಿಯೋಜಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ ಎಸ್ ಕೆ ಭಗತ್ ಅವರು, ನಾಲೆಯಲ್ಲಿ ನೀರಿನ ಹರಿವು ವೇಗವಾಗಿದ್ದು, ಇದೇ ಕಾರಣಕ್ಕೆ ಮಕ್ಕಳ ಪತ್ತೆ ಕಾರ್ಯಾಚರಣೆ ತಡವಾಗುತ್ತಿದೆ. ಆದರೂ ಮಕ್ಕಳ ಪತ್ತೆಗೆ ಎಲ್ಲ ಅಗತ್ಯ ಕ್ರಮಗಳನ್ನೂ ಕೈಗೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

Comments are closed.