ರಾಷ್ಟ್ರೀಯ

ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

Pinterest LinkedIn Tumblr


ವಾರಾಣಾಸಿ: ಉತ್ತರಪ್ರದೇಶದ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವೈದ್ಯಕೀಯ ವಿದ್ಯಾರ್ಥಿನಿ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ಯಾಂಪಸ್​ನಲ್ಲಿರುವ ವಸತಿನಿಲಯದ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಿಹಾರದ ಜಮೂಯಿ ನಗರದ ಮನಿಶಾ ಕುಮಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಅದೇ ವಿಶ್ವವಿದ್ಯಾಲಯದ ವೈದ್ಯಕೀಯ ಕಾಲೇಜಿನ ನೇತ್ರಶಾಸ್ತ್ರ ವಿಭಾಗದಲ್ಲಿ ಜೂನಿಯರ್ ವೈದ್ಯರಾಗಿಯೂ ಇದ್ದರು.

ಹಾಸ್ಟೆಲ್​ ಕೋಣೆಯಲ್ಲಿ ಎರಡು ಪುಟಗಳ ಡೆತ್​ನೋಟ್​ ಸಿಕ್ಕಿದ್ದು, ಅದರಲ್ಲಿ ಖಿನ್ನತೆಯಿಂದ ಬಳಲುತ್ತಿರುವುದನ್ನು ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿನಿ ಪೋಷಕರು ವಿಷಯ ತಿಳಿಸಲಾಗಿದೆ ಮತ್ತು ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುವುದಾಗಿಯೂ ಅವರು ಹೇಳಿದ್ದಾರೆ.

Comments are closed.