
ನವದೆಹಲಿ: 2003ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪೂರ್ವ ದೆಹಲಿಯ ಕಲ್ಯಾಣ್ ಪುರಿ ಮತದಾನ ಕೇಂದ್ರದಲ್ಲಿ ಮತದಾನ ಪ್ರಕ್ರಿಯೆಗೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ ಶಾಸಕ ಮನೋಜ್ ಕುಮಾರ್ ಗೆ ದೆಹಲಿ ಕೋರ್ಟ್ ಮಂಗಳವಾರ ಮೂರು ತಿಂಗಳು ಜೈಲುಶಿಕ್ಷೆ ವಿಧಿಸಿದೆ.
ದೆಹಲಿ ಕೋರ್ಟ್ ನ ಹೆಚ್ಚುವರಿ ಮುಖ್ಯ ಮೆಟ್ರೋಪೊಲಿಟಿಯನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್, ಹತ್ತು ಸಾವಿರ ರೂಪಾಯಿ ಬಾಂಡ್ ಮೇಲೆ ಮನೋಜ್ ಕುಮಾರ್ ಗೆ ಜಾಮೀನು ನೀಡಿದ್ದು, ಕುಮಾರ್ ಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದೆ.
ಚುನಾವಣಾ ಮತದಾನ ಪ್ರಕ್ರಿಯೆ ವೇಳೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ, ಸಾರ್ವಜನಿಕರ ಮತದಾನಕ್ಕೆ ತೊಂದರೆ ಕೊಟ್ಟ ಪ್ರಕರಣದಲ್ಲಿ ಕೋರ್ಟ್ ಜೂನ್ 11ರಂದು ಕುಮಾರ್ ದೋಷಿ ಎಂದು ತೀರ್ಪು ನೀಡಿತ್ತು.
Comments are closed.