
ಪುಣೆ: ಭಾರಿ ಮಳೆಯ ಪರಿಣಾಮ ವಸತಿ ಕಟ್ಟಡದ ಕಾಂಪೌಂಡ್ ಗೋಡೆ ಕುಸಿದು ಹದಿನೈದು ಜನರು ಮೃತಪಟ್ಟಿರುವ ದಾರುಣ ಘಟನೆ ಪುಣೆಯಲ್ಲಿ ನಡೆದಿದೆ. ಶನಿವಾರ ಮುಂಜಾನೆ ನಡೆದ ಈ ದುರ್ಘಟನೆಯಲ್ಲಿ ನಾಲ್ವರು ಮಕ್ಕಳು ಹಾಗೂ ಓರ್ವ ಮಹಿಳೆ ಸಹ ಸೇರಿದ್ದಾರೆ.
ಪುಣೆಯ ಕೊಂಧ್ವಾ ಪ್ರದೇಶದ ಸಂಭವಿಸಿದ ದುರಂತದಲ್ಲಿ ಹಲವಾರು ಕಾರುಗಳು ಜಖಂ ಆಗಿದೆ. ಅಪಾರ್ಟ್ ಮೆಂಟ್ ಸಂಕೀರ್ಣದ ಪಕ್ಕದಲ್ಲಿರುವ ಕೊಳೆಗೇರಿಗೆ ಗೋಡೆ ಅಪ್ಪಳಿಸಿದ್ದ ಕಾರಣ ಪಾರ್ಕಿಂಗ್ ಲಾಟ್ ನಲ್ಲಿ ನಿಲ್ಲಿಸಿದ ಕಾರುಗಳು ಅವಶೇಷಗಳಡಿ ಸಿಕ್ಕಿ ಭಗ್ನಗೊಂಡವು.
ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್‌ಡಿಆರ್‌ಎಫ್)ಮತ್ತು ಅಗ್ನಿಶಾಮಕ ಇಲಾಖೆಯ ರಕ್ಷಣಾ ಸಿಬ್ಬಂದಿ ಅಪಘಾತದ ಸ್ಥಳಕ್ಕಾಗಮಿಸಿ ಅಪಾಯಕ್ಕೆ ಸಿಕ್ಕಿಕೊಂಡಿರುವ ಜನರಿಗಾಗಿ ಶೋಧ ನಡೆಸಿದ್ದಾರೆ.
ಪುಣೆಯಲ್ಲಿ ಶುಕ್ರವಾರ ಭಾರಿ ಮಳೆಯಾಗಿದೆ. ಗುರುವಾರದಿಂದಲೇ ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿವರೆಗೆ 24 ಗಂಟೆಗಳಲ್ಲಿ 73.1 ಮಿಲಿಮೀಟರ್ ಮಳೆಯಾಗಿದೆ, ಇದು 2010 ರಿಂದ ಜೂನ್ ಬಳಿಕ ಅತಿ ಹೆಚ್ಚುಪ್ರಮಾಣದ ಮಳೆ ಎಂದು ದಾಖಲಾಗಿದೆ.
Comments are closed.