ರಾಷ್ಟ್ರೀಯ

ದಿಲ್ಲಿ ಮಾಜಿ ಸಿಎಂ, ಕಾಂಗ್ರೆಸ್‌ ಹಿರಿಯ ನಾಯಕಿ ಶೀಲಾ ದೀಕ್ಷಿತ್‌ ಇನ್ನಿಲ್ಲ

Pinterest LinkedIn Tumblr

ಹೊಸದಿಲ್ಲಿ: ಮೂರು ಬಾರಿ ರಾಷ್ಟ್ರ ರಾಜಧಾನಿ ಮುಖ್ಯಮಂತ್ರಿಯಾಗಿದ್ದ ಶೀಲಾ ದೀಕ್ಷಿತ್‌ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕಾಂಗ್ರೆಸ್‌ ಹಿರಿಯ ನಾಯಕರಾಗಿದ್ದ ಅವರಿಗೆ 81 ವರ್ಷ ವಯಸ್ಸಾಗಿತ್ತು. ಸುದೀರ್ಘ ಕಾಲದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು, ದಿಲ್ಲಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

1998ರಿಂದ ಸತತ ಮೂರು ಬಾರಿ ಅವರು ದಿಲ್ಲಿ ಸರಕಾರವನ್ನು ಮುನ್ನಡಿಸಿದ್ದರು. ರಾಷ್ಟ್ರ ರಾಜಧಾನಿಯಲ್ಲಿ ಸತತ ಜಯಗಳಿ, ಮುಖ್ಯಮಂತ್ರಿಯಾಗಿದ್ದು ಒಂದು ದಾಖಲೆಯಾಗಿತ್ತು.

ಸುಷ್ಮಾ ಸ್ವರಾಜ್‌ ಬಳಿಕ ದಿಲ್ಲಿ ಸರಕಾರದ 2ನೇ ಮಹಿಳಾ ಮುಖ್ಯಮಂತ್ರಿಯಾಗಿದ್ದ ಶೀಲಾ ದೀಕ್ಷಿತ್‌, ಇಂದಿರಾಗಾಂಧಿ ನೇತೃತ್ವದ ಯುಪಿಎ ಸರಕಾರಲ್ಲಿ ಕೇಂದ್ರ ಕ್ಯಾಬಿನೆಟ್‌ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಅನಾರೋಗ್ಯದ ನಿಮಿತ್ತ ದಿಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

1998 ರಿಂದ 2013ರ ವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್‌ ಸರಕಾರವನ್ನು ಅವರು ಮುನ್ನಡೆಸಿದ್ದರು. ಆರೋಗ್ಯ ಕಾರಣಗಳಿಂದ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯಲ್ಲಿದ್ದ ಅಜಯ್‌ ಮಕೇನ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಅಂದರೆ 2019 ಜನವರಿಯಿಂದ ದಿಲ್ಲಿಯ ಕಾಂಗ್ರೆಸ್‌ ಅಧ್ಯಕ್ಷ ಜವಾಬ್ದಾರಿ ಹೊತ್ತಿದ್ದರು. ಲೋಕಸಭೆ ಚುನಾವಣೆ ವೇಳೆ ದಿಲ್ಲಿಯ ಕಾಂಗ್ರೆಸ್‌ ನೇತೃತ್ವ ವಹಿಸಿದ್ದ ಅವರು, ಆಮ್‌ ಆದ್ಮಿ ಪಾರ್ಟಿ ಜತೆ ಮೈತ್ರಿ ನಿರಾಕರಿಸಿದ್ದರು. ಚುನಾವಣೆಯಲ್ಲಿ ದಿಲ್ಲಿಯ ಏಳು ಕ್ಷೇತ್ರಗಳ ಪೈಕಿ ಐದರಲ್ಲಿ ಸ್ಥಾನ ಪಡೆದುಕೊಳ್ಳುವಲ್ಲಿ ಸಫಲರಾಗಿದ್ದರು.

ಗಣ್ಯರ ಕಂಬನಿ
ಶೀಲಾ ದೀಕ್ಷಿತ್‌ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ, ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌, ಕಾಂಗ್ರೆಸ್‌ ನಾಯಕರಾದ ಕೆಸಿ ವೇಣುಗೋಪಾಲ್‌, ರಾಹುಲ್‌ ಗಾಂಧಿ, ಗೃಹ ಸಚಿವ ಎಂ ಬಿ ಪಾಟೀಲ್‌ ಸೇರಿದಂತೆ ಅನೇಕ ನಾಯಕರು ಕಂಬನಿ ಮಿಡಿದಿದ್ದಾರೆ. ಅಷ್ಟೇ ಅಲ್ಲದೆ ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್‌, ನಟ ಅಕ್ಷಯ್‌ ಕುಮಾರ್‌ ಸಂತಾಪ ವ್ಯಕ್ತಪಡಿಸಿದ್ದಾರೆ.

ದಿಲ್ಲಿಯ ಸರ್ವಾಂಗೀಣ ಅಭಿವೃದ್ಧಿಗೆ ಶೀಲಾ ದೀಕ್ಷಿತ್‌ ಅವರ ಪಾತ್ರ ಹಿರಿದು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ದುಃಖ ತಡೆದುಕೊಳ್ಳುವ ಶಕ್ತಿ ಸಿಗಲಿ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ನೂತನ ಸಂಸದ ಗೌತಮ್‌ ಗಂಭೀರ್‌, ಬಿಜೆಪಿ ದಿಲ್ಲಿ ಅಧ್ಯಕ್ಷ ಮನೋಜ್‌ ತಿವಾರಿ, ಕೇಂದ್ರ ಗೃಹಸಚಿವ ರಾಜ್‌ನಾಥ್‌ ಸಿಂಗ್‌, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವದ್ರಾ ಟ್ವಿಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

Comments are closed.