ರಾಷ್ಟ್ರೀಯ

ಮದುವೆ ಮುಗಿಸಿಕೊಂಡು ಬರುತ್ತಿದ್ದ ಪಿಕ್​​​​ ಅಪ್​​​ ವಾಹನಕ್ಕೆ ಟ್ರಕ್ ಡಿಕ್ಕಿ: 9 ಮಂದಿ ಸಾವು, ಹಲವರಿಗೆ ಗಂಭೀರ ಗಾಯ

Pinterest LinkedIn Tumblr

ಹಾಪುರ್: ಮದುವೆ ಮುಗಿಸಿಕೊಂಡು ಬರುತ್ತಿದ್ದ ಪಿಕ್​​​​ ಅಪ್​​​ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸ್ಥಳದಲ್ಲಿಯೇ ಮೃತಪಟ್ಟು ಹಲವರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಹಫೀಜ್​​​​​​ಪುರ ಸಮೀಪದ ಹಾಪುರ್​ನಲ್ಲಿ ಸೋಮವಾರ ನಡೆದಿದೆ.

ಎರಡು ವಾಹನಗಳು ಅತಿ ವೇಗವಾಗಿ ಬರುತ್ತಿದ್ದ ವೇಳೆ ಟ್ರಕ್ ವಾಹನ ಪಿಕ್​​​​​​ ಅಪ್​​ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಿಂದ ಪಿಕ್​​​ ಅಪ್​​ ವಾಹನ ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments are closed.