ರಾಷ್ಟ್ರೀಯ

ಹೊಸ ಪೋಕ್ಸೋ ಕಾಯ್ದೆಗೆ ಲೋಕಸಭೆ ಅನುಮೋದನೆ; ಅಪ್ರಾಪ್ತ ಹೆಣ್ಮಕ್ಕಳ ಅತ್ಯಾಚಾರಿಗಳಿಗೆ ಮರಣ ದಂಡನೆ

Pinterest LinkedIn Tumblr

ನವದೆಹಲಿ(ಆಗಸ್ಟ್​​.01): ಅಪ್ರಾಪ್ತ ಹೆಣ್ಣುಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ತಿದ್ದುಪಡಿ ಮಾಡಲಾಗಿರುವ ಈ ಹೊಸ ಪೋಕ್ಸೋ ಕಾಯ್ದೆಯೂ ಲೋಕಸಭೆಯಲ್ಲಿ ಅಂಗೀಕಾರವಾಗಿದೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ ಅವರೇ ಇಂದು ಈ ಹೊಸ ಬಿಲ್​​ ಮಂಡಿಸಿದ್ದು, ಸಂಸತ್​​ನಲ್ಲಿ ಅನುಮೋದನೆ ಸಿಕ್ಕಿದೆ.

ಕಳೆದ ವರ್ಷ ಕಾಶ್ಮೀರದ ಕತುವಾ ಹಾಗೂ ಉತ್ತರಪ್ರದೇಶದ ಉನ್ನಾವೋ ಮತ್ತು ಸೂರತ್​ನ ಅತ್ಯಾಚಾರ ಭಾರೀ ಸದ್ದು ಮಾಡಿತ್ತು. ದೇಶಾದ್ಯಂತ ಪ್ರಕರಣಗಳಿಗೆ ಸಂಬಂಧಿಸಿದಂತೆ ನರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪ್ರಕರಣಗಳ ಬೆನ್ನಲ್ಲೆ 12 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವೆಸಗವವರಿಗೆ ಗಲ್ಲು ಶಿಕ್ಷೆ ವಿಧಿಸುವ ಕೇಂದ್ರ ಸರ್ಕಾರ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಒಪ್ಪಿಗೆ ಸೂಚಿಸಿದ್ದಾರೆ.

ಶಿಶು ಕಾಮಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಲು ಸುಗ್ರೀವಾಜ್ಞೆ ಮೂಲಕ ಪೋಕ್ಸೋ ಕಾಯ್ದೆ ತಿದ್ದಪಡಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಪೋಕ್ಸೋ ಕಾಯ್ದೆಯಡಿ ಅತ್ಯಾಚಾರಿಗಳಿಗೆ ಸದ್ಯ ಕನಿಷ್ಠ 7 ವರ್ಷ ಮತ್ತು ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತಿದ್ದು, ಈ ತಿದ್ದುಪಡಿ ಬಳಿಕ 12 ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಕಾಮುಕರಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತೆ.

ಉತ್ತರಪ್ರದೇಶದ ಉನ್ನಾವ್​ನಲ್ಲಿ ಅಪ್ರಾಪ್ತ ಯುವತಿ ಮೇಲಿನ ಅತ್ಯಾಚಾರ ಮತ್ತು ಜಮ್ಮು-ಕಾಶ್ಮಿರದ ಕಥುವಾದಲ್ಲಿ 8 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರದ ಘಟನೆಗಳ ಬಳಿಕ ದೇಶಾದ್ಯಂತ ಭಾರೀ ಆಕ್ರೋಶ ಕೇಳಿಬಂದಿತ್ತು. ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಸಾರ್ವಜನಿಕರಿಂದ ಒತ್ತಡವೂ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದಲ್ಲಿ ನಡೆದ ತುರ್ತು ಸಚಿವ ಸಭೆ ಈ ನಿರ್ಧಾರ ಕೈಗೊಂಡಿತ್ತು.

ಇದರ ಜೊತೆಗೆ ಅತ್ಯಾಚಾರ ಪ್ರಕರಣಗಳ ಶೀಘ್ರ ತನಿಖೆಗೂ ಕೇಂದ್ರ ಸಂಪುಟ ಅಗತ್ಯ ಕ್ರಮಗಳನ್ನ ಕೈಗೊಳ್ಳಲು ನಿರ್ಧರಿಸಿತ್ತು. 16 ವರ್ಷದ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ವಿಧಿಸುವ ಶಿಕ್ಷೆಯ ಪ್ರ,ಮಾಣವನ್ನ 10ರಿಂದ 20ವರ್ಷಕ್ಕೆ ಏರಿಸಲೂ ಸಂಪುಟ ನಿರ್ಣಯಿಸಿತ್ತು.

ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ರಾಷ್ಟ್ರಪತಿ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ. ಅಲ್ಲದೇ ತಿದ್ದುಪಡಿಯಾಗಿರುವ ಕಾಯ್ದೆ ಕೂಡ ಕಾನೂನು ಸ್ವರೂಪ ಪಡೆದುಕೊಂಡಿದೆ. ಸದ್ಯವೀಗ ಲೋಕಸಭೆಯಲ್ಲಿ ಈ ಕಾಯ್ದೆಗೆ ಅನುಮೋದನೆ ಸಿಕ್ಕಿದ್ದು, ಸದ್ಯದಲ್ಲೇ ಕಾರ್ಯರೂಪಕ್ಕೆ ಬರಲಿದೆ.

Comments are closed.