ರಾಷ್ಟ್ರೀಯ

ಜಮ್ಮು-ಕಾಶ್ಮೀರ ಇನ್ನು ಮುಂದೆ ರಾಜ್ಯವಲ್ಲ, ಕೇಂದ್ರಾಡಳಿತ ಪ್ರದೇಶ!

Pinterest LinkedIn Tumblr

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುವ ಆರ್ಟಿಕಲ್ 35ಎ, 370 ನ್ನು ರದ್ದುಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಜಮ್ಮು-ಕಾಶ್ಮೀರಕ್ಕೆ ಇದ್ದ ರಾಜ್ಯದ ಸ್ಥಾನಮಾನವನ್ನೂ ವಾಪಸ್ ಪಡೆದಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಬಗ್ಗೆ ಸಂಸತ್ ನಲ್ಲಿ ಹೇಳಿದ್ದು, ಜಮ್ಮು-ಕಾಶ್ಮೀರವನ್ನು ವಿಭಜನೆ ಮಾಡುವ ಐತಿಹಾಸಿಕ ನಿರ್ಣಯವನ್ನು ಘೋಷಿಸಿದ್ದಾರೆ.

ಜಮ್ಮು-ಕಾಶ್ಮೀರದಿಂದ ಲಡಾಕ್ ನ್ನು ಪ್ರತ್ಯೇಕಗೊಳಿಸಿ, ಎರಡೂ ಪ್ರದೇಶಗಳು ಇನ್ನು ಮುಂದಿನ ದಿನಗಳಲ್ಲಿ ಕೇಂದ್ರಾಡಳಿತ ಪ್ರದೇಶವಾಗಿರಲಿವೆ. ಜಮ್ಮು-ಕಾಶ್ಮೀರ ವಿಧಾನಸಭೆ ಹೊಂದಿರುವ ಕೇಂದ್ರಾಡಳಿತ ಪ್ರದೇಶವಾಗಲಿದ್ದರೆ, ಲಡಾಕ್ ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಿರಲಿದೆ.

ಜಮ್ಮು-ಕಾಶ್ಮೀರಕ್ಕೆ ಇನ್ನು ಮುಂದೆ ಬೇರೆ ರಾಜ್ಯಗಳಂತೆ ಎಲ್ಲ ಕಾಯ್ದೆ, ಕಾನೂನು ಅನ್ವಯವಾಗಲಿದೆ. ಯಾರು ಬೇಕಾದರೂ ಅಲ್ಲಿ ಇನ್ನು ಮುಂದೆ ಜಾಗ ಖರೀದಿ ಮಾಡಬಹುದು. ಅಲ್ಲಿ ಹೋಗಿ ಬದುಕು ಕಟ್ಟಿಕೊಳ್ಳಬಹುದು. ಕೈಗಾರಿಕೆಗಳು, ಉದ್ಯಮಗಳು ಇನ್ನು ಮುಂದೆ ತಲೆ ಎತ್ತಲಿದೆ. ಅಕ್ಟೊಬರ್’ನಲ್ಲಿ ಹೂಡಿಕೆದಾರ ಸಮಾವೇಶ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದ್ದು, ಹೊರಗಿನವರ ಬಂಡವಾಳ ಹರಿದುಬರಲಿದೆ. ಇದರಿಂದಾಗಿ ಜಮ್ಮು-ಕಾಶ್ಮೀರ ವಿಶ್ವದಲ್ಲಿ ಬಹುದೊಡ್ಡ ಪ್ರವಾಸಿ ತಾಣವಾಗಿ ಬದಲಾಗಲಿದೆ.

Comments are closed.