ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಸಂದರ್ಭದಲ್ಲಿ ಗದ್ಗದಿತರಾದರು.
ಸುಷ್ಮಾ ಸ್ವರಾಜ್ ಅಂತಿಮ ದರ್ಶನಕ್ಕೆ ಆಗಮಿಸಿದಾಗ ಸುಷ್ಮಾ ಅವರ ಪುತ್ರಿ ಮತ್ತು ಪತಿ ಸ್ವರಾಜ್ ಕೌಶಲ್ ಅವರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ತುಂಬಾ ಭಾವುಕರಾದರು. ಸುಷ್ಮಾ ಮಗಳಿಗೆ ಸಾಂತ್ವನ ಹೇಳಿ, ಧೈರ್ಯ ತುಂಬುವ ಮಾತುಗಳನ್ನಾಡಿದ ಅವರು, ಸ್ವರಾಜ್ ಕೌಶಲ್ ಅವರಿಗೆ ಸಾಂತ್ವನ ಹೇಳಿದರು.
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸುಷ್ಮಾ ಅವರ ನಿಧನಕ್ಕೆ ಸಂತಾಪ ಸೂಚಿಸಿ ಅವರ ಅಧಿಕಾರಾವಧಿಯನ್ನು ಶ್ಲಾಘಿಸಿದರು.
Comments are closed.