ರಾಷ್ಟ್ರೀಯ

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸೋನಿಯಾ ಗಾಂಧಿ

Pinterest LinkedIn Tumblr

ನವದೆಹಲಿ: ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಮತ್ತೆ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ರಾಹುಲ್ ಗಾಂಧಿ ರಾಜಿನಾಮೆ ಬಳಿಕ ತೆರವಾಗಿದ್ದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಇಂದು ಆಯ್ಕೆ ನಡೆದಿತ್ತು. ಇದೇ ಕಾರಣಕ್ಕಾಗಿ ದೆಹಲಿಯಲ್ಲಿ ತಡರಾತ್ರಿವರೆಗೂ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆದಿತ್ತು. ಅಂತಿಮವಾಗಿ ಇದೀಗ ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್ ಪಕ್ಷದ ಮಧ್ಯಂತರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಇನ್ನು ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಗುಲಾಂ ನಬಿ ಆಜಾದ್‌ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, ‘ಶನಿವಾರ ಬೆಳಗ್ಗೆಯಿಂದ ನಡೆದ ಕಾಂಗ್ರೆಸ್‌ ಕಾರ್ಯಕಾರಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಎಲ್ಲ ರಾಜ್ಯದ ಪ್ರಮುಖ ನಾಯಕರು, ಗಾಂಧಿ ಕುಟುಂಬಕ್ಕೇ ಅಧ್ಯಕ್ಷ ಸ್ಥಾನಕ್ಕೆ ಒಕ್ಕೊರೋಲಿನ ಅಭಿಪ್ರಾಯ ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಸೋನಿಯಾ ಗಾಂಧಿ ಅವರಿಗೆ ಮತ್ತೆ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನೀಡಲಾಗಿದೆ ಎಂದು ಹೇಳಿದರು.

Comments are closed.