ರಾಷ್ಟ್ರೀಯ

ಜನಸಂಖ್ಯಾ ಸ್ಫೋಟಕ್ಕೆ ಕಡಿವಾಣ ಹಾಕಬೇಕಾಗಿದೆ; ಮೋದಿ

Pinterest LinkedIn Tumblr


ನವದೆಹಲಿ:ದೇಶದ ಅಭಿವೃದ್ಧಿ ಒಂದೆಡೆಯಾದರೆ, ಮತ್ತೊಂದೆಡೆ ದೇಶದಲ್ಲಿ ಜನಸಂಖ್ಯಾ ಸ್ಫೋಟದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಕೆಂಪುಕೋಟೆಯಲ್ಲಿ 73ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತ ಕಳವಳ ವ್ಯಕ್ತಪಡಿಸಿದ ಅವರು ಈ ಸಮಸ್ಯೆಯನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಹೇಳಿದರು.

ಇಂದು ನಾನು ಮುಖ್ಯವಾದ ವಿಷಯದ ಬಗ್ಗೆ ಮಾತನಾಡಬೇಕಾಗಿದೆ. ಅದು ದೇಶದ ಜನಸಂಖ್ಯೆಯಲ್ಲಿನ ಹೆಚ್ಚಳ. ನಾವು ಇದರ ಬಗ್ಗೆ ಅಲೋಚಿಸಬೇಕು. ನಿಜಕ್ಕೂ ನಮ್ಮ ಮಕ್ಕಳ ಆಕಾಂಕ್ಷೆಗಳಿಗೆ ನ್ಯಾಯ ಕೊಡಲು ಸಾಧ್ಯವಿದೆಯೇ? ಈ ಸಮಸ್ಯೆ ಬಗ್ಗೆ ದೊಡ್ಡ ಪ್ರಮಾಣದಲ್ಲಿ ಚರ್ಚೆ ನಡೆಯಬೇಕಾದ ಅಗತ್ಯವಿದೆ. ಅಷ್ಟೇ ಅಲ್ಲ ಜನಸಂಖ್ಯಾ ಸ್ಫೋಟದ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು.

ದೇಶದಲ್ಲಿನ ಜನಸಂಖ್ಯಾ ಸ್ಫೋಟದಿಂದ ಭವಿಷ್ಯದಲ್ಲಿ ನಮ್ಮ ಮುಂದಿನ ಜನಾಂಗ ಹಲವು ಸಮಸ್ಯೆಗಳನ್ನು ಎದುರಿಸುವಂತಾಗಲಿದೆ. ಈ ನಿಟ್ಟಿನಲ್ಲಿ ಜನಸಂಖ್ಯಾ ಸ್ಫೋಟದ ಬಗ್ಗೆ ನಮಗೆ ಕಳವಳ ಇದ್ದಿರುವುದಾಗಿ ಈ ಸಂದರ್ಭದಲ್ಲಿ ಮೋದಿ ಹೇಳಿದರು.

ಜನಸಂಖ್ಯೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ಕೂಡಾ ಕ್ರಮ ಕೈಗೊಳ್ಳಬೇಕಾಗಿದೆ. ಕುಟುಂಬ ನಿಯಂತ್ರಣ ಯೋಜನೆಯೇ ನಿಜವಾದ ದೇಶಭಕ್ತಿ ಎಂದು ಪ್ರಧಾನಿ ಈ ಸಂದರ್ಭದಲ್ಲಿ ತಿಳಿಸಿದರು.

Comments are closed.