ರಾಷ್ಟ್ರೀಯ

ಅಸ್ಸಾಂ ರೈಫಲ್ಸ್ ನ ಮೇಜರ್ ಜನರಲ್ ಲೈಂಗಿಕ ಕಿರುಕುಳ ಆರೋಪ ಸಾಬೀತು; ವಜಾ

Pinterest LinkedIn Tumblr


ನವದೆಹಲಿ: ಲೈಂಗಿಕ ಕಿರುಕುಳ ಆರೋಪದ ಸಾಬೀತಾದ ಹಿನ್ನೆಲೆಯಲ್ಲಿ ಅಸ್ಸಾಂ ರೈಫಲ್ಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಜನರಲ್ ಅವರನ್ನು ಹುದ್ದೆಯಿಂದ ವಜಾಗೊಳಿಸಿರುವುದಾಗಿ ಆರ್ಮಿ ಮುಖ್ಯಸ್ಥ ಬಿಪಿನ್ ರಾವತ್ ಶುಕ್ರವಾರ ತಿಳಿಸಿದ್ದಾರೆ.

ಮೇಜರ್ ಜನರಲ್ ಆರ್ ಎಸ್ ಜಸ್ವಾಲ್ ವಿರುದ್ಧ ಕೋರ್ಟ್ ಮಾರ್ಷಲ್ ಮುಕ್ತಾಯಗೊಂಡಿದ್ದು, ದೋಷಿ ಎಂದು ತೀರ್ಪು ಬಂದ ಹಿನ್ನೆಲೆಯಲ್ಲಿ ಅಧಿಕಾರದಿಂದ ವಜಾಗೊಳಿಸುವ ಆದೇಶಕ್ಕೆ ಜುಲೈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಆರ್ಮಿ ಮುಖ್ಯಸ್ಥ ಬಿಪಿನ್ ಅವರು ಸಹಿ ಹಾಕಿರುವುದಾಗಿ ವರದಿ ತಿಳಿಸಿದೆ.

ಆರೋಪ ಸಾಬೀತಾದ ನಿಟ್ಟಿನಲ್ಲಿ ಮೇಜರ್ ಜನರಲ್ ಅವರನ್ನು ವಜಾಗೊಳಿಸುವಂತೆ ಆರ್ಮಿ ಜನರಲ್ ಕೋರ್ಟ್ ಮಾರ್ಷಲ್ ಕಳೆದ ಡಿಸೆಂಬರ್ ನಲ್ಲಿಯೇ ಶಿಫಾರಸು ಮಾಡಿತ್ತು ಎಂದು ವರದಿ ವಿವರಿಸಿದೆ.

Comments are closed.