ರಾಷ್ಟ್ರೀಯ

ಮತದಾನದ ಗುರುತಿನ ಚೀಟಿ ಜೊತೆಗೆ ಆಧಾರ್‌ ಲಿಂಕ್ ಕುರಿತು ಕಾನೂನು ಸಚಿವಾಲಯಕ್ಕೆ ಚುನಾವಣಾ ಆಯೋಗದ ಪತ್ರ

Pinterest LinkedIn Tumblr


ನವದೆಹಲಿ: ಆಧಾರ್ ಕಾರ್ಡ್ ಅನ್ನು ಮತದಾರರ ಗುರುತಿನ ಚೀಟಿ (Voter ID) ಯೊಂದಿಗೆ ಲಿಂಕ್ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದೆ.

ಚುನಾವಣಾ ಆಯೋಗ ಪತ್ರದ ಮೂಲಕ ಸಾರ್ವಜನಿಕ ಪ್ರಾತಿನಿಧ್ಯ ಕಾನೂನು ಮತ್ತು ಆಧಾರ್‌ಗೆ ಸಂಬಂಧಿಸಿದ ಕಾನೂನನ್ನು ತಿದ್ದುಪಡಿ ಮಾಡುವಂತೆ ಕಾನೂನು ಸಚಿವಾಲಯವನ್ನು ಒತ್ತಾಯಿಸಿದೆ ಎನ್ನಲಾಗಿದೆ.

ಆಧಾರ್ ಕಾರ್ಡ್ ಅನ್ನು ಮತದಾರರ ಪಟ್ಟಿಗೆ ಲಿಂಕ್ ಮಾಡುವ ಮೂಲಕ ನಕಲಿ ಮತದಾರರ ಗುರುತಿನ ಚೀಟಿ ಹಾವಳಿ ಕಡಿಮೆಯಾಗುತ್ತವೆ ಎಂದು ಚುನಾವಣಾ ಆಯೋಗ ಅಭಿಪ್ರಾಯ ವ್ಯಕ್ತಪಡಿಸಿದೆ.

ಮತದಾರರ ಗುರುತಿನ ಚೀಟಿಯನ್ನು ಆಧಾರ್ ಕಾರ್ಡ್‌ಗೆ ಜೋಡಿಸಬೇಕು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗವು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

Voter ID ಅನ್ನು ಆಧಾರ್ ಕಾರ್ಡ್‌ಗೆ ಲಿಂಕ್ ಮಾಡುವುದರಿಂದ ಚುನಾವಣೆಯಲ್ಲಿ ನಕಲಿ ಮತದಾನದ ಪ್ರಮಾಣ ಕಡಿಮೆಯಾಗುತ್ತದೆ ಎಂದು ಚುನಾವಣಾ ಆಯೋಗ ಅಭಿಪ್ರಾಯಪಟ್ಟಿದೆ.

Comments are closed.