ರಾಷ್ಟ್ರೀಯ

24 ಸಾವಿರ ಕೋಟಿ ವೆಚ್ಚದಲ್ಲಿ 75 ಮೆಡಿಕಲ್ ಕಾಲೇಜುಗಳ ಸ್ಥಾಪನೆ

Pinterest LinkedIn Tumblr


ನವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ ಕೇಂದ್ರ ಸರಕಾರ ದೇಶಾದ್ಯಂತ 75 ಹೊಸ ಮೆಡಿಕಲ್ ಕಾಲೇಜುಗಳನ್ನು ನಿರ್ಮಿಸಲಿದ್ದು, ಇದಕ್ಕಾಗಿ 24, 375 ಕೋಟಿ ರೂಪಾಯಿ ವ್ಯಯಿಸಲಿದೆ ಎಂದು ವರದಿ ತಿಳಿಸಿದೆ.

ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನೂತನ ಮೆಡಿಕಲ್ ಕಾಲೇಜುಗಳನ್ನು ತೆರೆಯುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಪರಿಸರ, ಅರಣ್ಯ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಘೋಷಿಸಿದರು.

ಮೂರು ವರ್ಷಗಳಲ್ಲಿ 75 ನೂತನ ಮೆಡಿಕಲ್ ಕಾಲೇಜುಗಳನ್ನು ತೆರೆಯುವುದರಿಂದ ಸುಮಾರು 15,700ಕ್ಕೂ ಅಧಿಕ ಮೆಡಿಕಲ್ ಸೀಟುಗಳು ದೊರೆಯುತ್ತದೆ. ಆ ನಿಟ್ಟಿನಲ್ಲಿ ಮೆಡಿಕಲ್ ಶಿಕ್ಷಣದ ಅತೀ ದೊಡ್ಡ ವಿಸ್ತರಣೆ ಇದಾಗಿದೆ ಎಂದು ಜಾವ್ಡೇಕರ್ ವಿವರಿಸಿದರು.

2021-22ರಲ್ಲಿ ನೂತನ ಮೆಡಿಕಲ್ ಕಾಲೇಜು ನಿರ್ಮಾಣವಾಗುವ ಮೂಲಕ 15,700 ಎಂಬಿಬಿಎಸ್ ವೈದ್ಯರು ನಮಗೆ ಹೆಚ್ಚುವರಿ ಸಿಗಲಿದ್ದಾರೆ. ಇದರಿಂದ ಕನಿಷ್ಠ ಮಟ್ಟದ ಆರೋಗ್ಯ ಸೇವೆ ಇರುವಲ್ಲಿ ಉತ್ತಮ ಆರೋಗ್ಯ ಸೇವೆ ನೀಡಲು ಸಾಧ್ಯವಾಗಲಿದೆ ಎಂದು ಹೇಳಿದರು.

Comments are closed.