
ನವದೆಹಲಿ: ದೆಹಲಿಯಲ್ಲಿ ಸರಗಳ್ಳತನ ಮುಂದುವರಿದಿದ್ದು, ಮಗುವಿನ ಜತೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಸರ ಅಪಹರಿಸಿರುವ ಘಟನೆ ದೆಹಲಿಯಲ್ಲಿ ಶುಕ್ರವಾರ ನಡೆದಿದೆ.
ಮಹಿಳೆ ದೆಹಲಿಯ ಚಾವ್ಲಾ ಪ್ರದೇಶದಲ್ಲಿ ಮಗುವಿನ ಜತೆ ನಡೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಮೋಟಾರ್ ಸೈಕಲ್ ನಲ್ಲಿ ಬಂದ ಇಬ್ಬರು ದಿಢೀರನೆ ಆಕೆಯ ಕತ್ತಿನಲ್ಲಿದ್ದ ಸರವನ್ನು ಅಪಹರಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ವರದಿ ತಿಳಿಸಿದೆ.
ಕುತ್ತಿಗೆಯಲ್ಲಿದ್ದ ಸರ ಅಪಹರಿಸಿದ್ದ ತಕ್ಷಣವೇ ಮಹಿಳೆ ಸರಗಳ್ಳರನ್ನು ಅಟ್ಟಿಸಿಕೊಂಡು ಹೋಗಿದ್ದಳು. ಆದರೆ ಅವರು ಪರಾರಿಯಾಗಿರುವುದಾಗಿ ವರದಿ ವಿವರಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇತ್ತೀಚೆಗೆ ದೆಹಲಿಯ ಬೀದಿಗಳಲ್ಲಿ ಸರಗಳ್ಳತನ ಪ್ರಕರಣ ಹೆಚ್ಚಾಗಿದ್ದು, ಒಂಟಿ ಮಹಿಳೆಯರು ನಡೆದುಕೊಂಡು ಹೋಗುತ್ತಿರುವುದನ್ನೇ ಗುರಿಯಾಗಿರಿಸಿಕೊಂಡು ಸರಗಳ್ಳತನ ನಡೆಸಲಾಗುತ್ತಿದೆ ಎಂದು ವರದಿ ವಿವರಿಸಿದೆ.
Comments are closed.