ರಾಷ್ಟ್ರೀಯ

ಪ್ರೀತಿಗೆ ಒಪ್ಪಿಗೆ ನೀಡಲಿಲ್ಲ ಎಂದು ಅಡುಗೆಯಲ್ಲಿ ವಿಷ ಬೆರೆಸಿದ ಮಗಳು

Pinterest LinkedIn Tumblr


ಲಖನೌ: ತನ್ನ ಪ್ರೀತಿಗೆ ಒಪ್ಪಿಗೆ ನೀಡಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಅಪ್ರಾಪ್ತೆಯೊಬ್ಬಳು ಇಡೀ ಕುಟುಂಬಕ್ಕೆ ಅಡುಗೆಯಲ್ಲಿ ವಿಷ ಬೆರೆಸಿ ಪ್ರಿಯಕರನ ಜೊತೆ ಓಡಿ ಹೋಗಿರುವ ಘಟನೆ ಉತ್ತರ ಪ್ರದೇಶದ ಮೊರಾದಬಾದ್ ನಲ್ಲಿ ಬುಧವಾರ ನಡೆದಿದೆ.

ವಿಷ ಆಹಾರ ಸೇವಿಸಿ ಪ್ರಜ್ಞೆ ತಪ್ಪಿದ ಬಾಲಕಿಯ ಕುಟುಂಬ ಸದಸ್ಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಾಲಕಿಯ ಜೊತೆ ಪರಾರಿಯಾಗಿರುವ ಯುವಕ ಆಕೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಜೈಲು ಸೇರಿದ್ದ. ಕೆಲ ದಿನಗಳ ಹಿಂದಷ್ಟೆ ಜಾಮೀನಿನ ಮೇಲೆ ಹೊರ ಬಂದು ಬಾಲಕಿಯ ಜೊತೆ ಓಡಿ ಹೋಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Comments are closed.