ರಾಷ್ಟ್ರೀಯ

ಅಮಿತಾಬ್​ ಬಚ್ಚನ್​ಗೆ​ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

Pinterest LinkedIn Tumblr


ನವದೆಹಲಿ: ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಜೀವಮಾನ ಸಾಧನೆಗಾಗಿ ಕೇಂದ್ರ ಸರ್ಕಾರ ಕೊಡಮಾಡುವ ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿಗೆ ಈ ಬಾರಿ ಬಾಲಿವುಡ್​ ಚಿತ್ರರಂಗದ ಬಿಗ್​ಬಿ ಅಮಿತಾಬ್​ ಬಚ್ಚನ್​ ಅವರನ್ನು ಆಯ್ಕೆ ಮಾಡಿದೆ.

ಅಮಿತಾಬ್​ ಬಚ್ಚನ್ ಅವರು ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಶುಭಾಶಯ ಕೋರಿ ಮಂಗಳವಾರ ಸಂಜೆ ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್ ಟ್ವೀಟ್ ಮಾಡಿದ್ದಾರೆ. ಎರಡು ತಲೆಮಾರುಗಳಿಗೆ ಮನರಂಜನೆ ಉಣಬಡಿಸಿದ ದಂತಕತೆ ಅಮಿತಾಬ್​ ಬಚ್ಚನ್​ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಜಾವಡೇಕರ್​ ಶುಭಾಶಯ ತಿಳಿಸಿದ್ದಾರೆ.​

ಏನಿದು ಫಾಲ್ಕೆ ಪ್ರಶಸ್ತಿ?
ಸಿನಿಮಾ ಕ್ಷೇತ್ರದಲ್ಲಿ ಜೀವಮಾನ ಸಾಧನೆಗಾಗಿ ಭಾರತೀಯ ಸಿನಿಮಾ ರಂಗದ ಪಿತಾಮಹಾ ದಾದಾಸಾಹೇಬ್ ಫಾಲ್ಕೆ ಹೆಸರಲ್ಲಿ ಭಾರತ ಸರ್ಕಾರ 1969ರಿಂದ ಪ್ರಶಸ್ತಿ ನೀಡುತ್ತಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಚಲನಚಿತ್ರೋತ್ಸವಗಳ ನಿರ್ದೇಶನಾಲಯದಿಂದ ಆಯೋಜಿಸಲಾಗುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಸಮಾರಂಭದಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ.

ಪ್ರಶಸ್ತಿಯು ಸ್ವರ್ಣ ಕಮಲ ಪದಕ, ಶಾಲು ಹಾಗೂ 10 ಲಕ್ಷ ರೂ.ನಗದು ಬಹುಮಾನವನ್ನು ಒಳಗೊಂಡಿರುತ್ತದೆ. ನಟಿ ದೇವಿಕಾ ರಾನೀ ಅವರಿಗೆ 17ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಮೊದಲ ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. 1995ರಲ್ಲಿ ವರನಟ ಡಾ.ರಾಜಕುಮಾರ್ ಅವರಿಗೆ ಫಾಲ್ಕೆ ಪ್ರಶಸ್ತಿ ನೀಡಲಾಗಿತ್ತು.

Comments are closed.