ರಾಷ್ಟ್ರೀಯ

ಆಂಧ್ರದಲ್ಲಿ: ಒಂದೇ ದಿನ 1 ಲಕ್ಷ 26 ಸಾವಿರ ಜನರಿಗೆ ಸರ್ಕಾರಿ ಕೆಲಸ ನೀಡಿ ವಿಶ್ವ ದಾಖಲೆ

Pinterest LinkedIn Tumblr


ಹೈದರಾಬಾದ್​​(ಅ.01): ಸುಮಾರು 1 ಲಕ್ಷ 26 ಸಾವಿರ ಜನರಿಗೆ ಉದ್ಯೋಗ ಸೃಷ್ಟಿಸುವ ಮೂಲಕ ಆಂಧ್ರಪ್ರದೇಶ ಸರ್ಕಾರ ವಿಶ್ವ ದಾಖಲೆ ನಿರ್ಮಿಸಿದೆ. ಖುದ್ದು ಸಿಎಂ ಜಗನ್​​ ಮೋಹನ್​​ ರೆಡ್ಡಿಯವರೇ, ಹೊಸದಾಗಿ ನೇಮಕಗೊಂಡವರಿಗೆ ಆದೇಶ ಪತ್ರ ವಿತರಿಸಿ ಅಭಿನಂದಿಸಿದ್ದಾರೆ.

ಆಂಧ್ರ ಪ್ರದೇಶದ ನಿರುದ್ಯೋಗ ಯುವಕರಿಗೆ ಸಿಎಂ ಜಗನ್​​ ಮೋಹನ್​​ ರೆಡ್ಡಿ ಸಿಹಿಸುದ್ದಿ ನೀಡಿದ್ದಾರೆ. ಇನ್ಮುಂದೆ ಪ್ರತಿವರ್ಷವೂ ಸರ್ಕಾರದ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಇಂದು ವಿಜಯವಾಡದಲ್ಲಿ ನೌಕಕರಿಗೆ ಉದ್ಯೋಗ ನೇಮಕಾತಿ ಪತ್ರ ವಿತರಿಸುವಾಗ ಮಾತಾಡಿದ ಸಿಎಂ ಜಗನ್​​ ಮೋಹನ್​​ ರೆಡ್ಡಿ, ವೈಎಸ್​ಆರ್​​ ಕಾಂಗ್ರೆಸ್​ ಸರ್ಕಾರ ನಿರುದ್ಯೋಗ ಹೋಗಲಾಡಿಸುವ ಪಣತೊಟ್ಟಿದೆ. ಹಾಗಾಗಿ ಇನ್ಮುಂದೆ ಯುವಕರಿಗಾಗಿ ಭಾರೀ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಮಾಡುವ ಗುರಿ ಹೊಂದಿದ್ದೇವೆ. ಪ್ರತಿವರ್ಷ ಜನವರಿ ತಿಂಗಳಿನಲ್ಲಿ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗಳು ನಡೆಯಲಿವೆ ಎಂದರು.

ಇದನ್ನೂ ಓದಿ: ಆಶಾ ಕಾರ್ಯಕರ್ತರಿಗೆ ಆಂಧ್ರ ಸಿಎಂ ಜಗನ್​​ ಮೋಹನ್​​ ರೆಡ್ಡಿ ಭರ್ಜರಿ ಗಿಫ್ಟ್​​: ದಿಢೀರ್​​ 3 ರಿಂದ 10 ಸಾವಿರಕ್ಕೆ ಸಂಬಳ ಏರಿಕೆ

ಈ ಹಿಂದೆ ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ವೈ.ಎಸ್​​ ಜಗನ್​​ ಮೋಹನ್​​ ರೆಡ್ಡಿಯವರು, ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದರು. ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿದ್ದ ಗೌರವ ಧನ ಮೂರು ಸಾವಿರದಿಂದ ದಿಢೀರ್​​ 10 ಸಾವಿರಕ್ಕೇರಿಸಿ ಅಧಿಕೃತವಾಗಿ ಘೋಷಿಸಿದ್ದರು. ಇದರಿಂದ ಕಡಿಮೆ ಸಂಬಳ ಪಡೆಯುತ್ತಿದ್ದ ತಾಯಂದಿರ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿತ್ತು.

ಪ್ರಮಾಣ ವಚನ ಸ್ವೀಕರಿಸಿದ ದಿನದಿಂದ ಸಿಎಂ ಜಗನ್​​ ಮೋಹನ್​​ ರೆಡ್ಡಿ ಅವರು, ಸತತ ಹೊಸ ಯೋಜನೆಗಳನ್ನು ಘೋಷಿಸುತ್ತಲೇ ಇದ್ದಾರೆ. ವೃದ್ಧಾಪ್ಯ ವೇತನ ಹೆಚ್ಚಳ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ, ಕಷ್ಟಪಟ್ಟು ದುಡಿಯುವ ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಗಿಫ್ಟ್​ ನೀಡಿದ್ದರು. ಅಂತೆಯೇ ನಿರುದ್ಯೋಗಿಗಳಿಗೆ 1 ಲಕ್ಷ 26 ಸಾವಿರ ಸರ್ಕಾರಿ ಉದ್ಯೋಗ ನೀಡುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.

Comments are closed.