ರಾಷ್ಟ್ರೀಯ

ಚಿದಂಬರಂಗೆ ಮನೆ ಊಟ ಕೊಡಲು ಕೋರ್ಟ್ ಅಸ್ತು

Pinterest LinkedIn Tumblr


ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 17ರವರೆಗೆ ಕೋರ್ಟ್ ಮುಂದುವರಿಸಿ ಗುರುವಾರ ಆದೇಶ ನೀಡಿದೆ.

ಇಂದು ಚಿದಂಬರಂ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ಸಂದರ್ಭದಲ್ಲಿ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಬೇಕೆಂಬ ಸಿಬಿಐ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಅಕ್ಟೋಬರ್ 17ರವರೆಗೆ ವಿಸ್ತರಿಸಿ ಗುರುವಾರ ಆದೇಶ ನೀಡಿದೆ.

ಚಿದಂಬರಂ ಪರ ವಕೀಲರು ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿರುವುದಾಗಿಯೂ ಸಿಬಿಐ ಕೋರ್ಟ್ ಗೆ ಮಾಹಿತಿ ನೀಡಿದೆ. ಏತನ್ಮಧ್ಯೆ ತಮ್ಮ ಕಕ್ಷಿದಾರ, ಮಾಜಿ ವಿತ್ತ ಸಚಿವ ಚಿದಂಬರಂ ಅನಾರೋಗ್ಯಕ್ಕೆ ಒಳಗಾಗಿದ್ದು ಅವರಿಗೆ ಮನೆ ಊಟಕ್ಕೆ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ವಕೀಲ ಕಪಿಲ್ ಸಿಬಲ್ ಅವರ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದರು. ಚಿದಂಬರಂ ಪರ ವಕೀಲ ಸಿಬಲ್ ಅವರ ಮನವಿ ಪುರಸ್ಕರಿಸಿದ ಕೋರ್ಟ್ ಮನೆ ಊಟ ನೀಡಲು ಅನುಮತಿ ನೀಡಿರುವುದಾಗಿ ವರದಿ ತಿಳಿಸಿದೆ.

Comments are closed.