ರಾಷ್ಟ್ರೀಯ

ಜನ ಪ್ರಶ್ನಿಸುತ್ತಿದ್ದಾರೆ, ಪರಿಹಾರ ನೀಡಿ – ಅಮಿತ್ ಶಾ ಬಳಿ ಡಿವಿಎಸ್, ಜೋಷಿ ಮನವಿ

Pinterest LinkedIn Tumblr


ನವದೆಹಲಿ: ಕೇಂದ್ರ ಕ್ಯಾಬಿನೆಟ್ ಸಭೆ ನಡೆಯುವ ಮುನ್ನ ಇಂದು ಸಂಜೆ ಕರ್ನಾಟಕದ ಸಚಿವರಾದ ಪ್ರಹ್ಲಾದ್ ಜೋಷಿ ಮತ್ತು ಸದಾನಂದ ಗೌಡ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ನೆರೆ ಪರಿಹಾರ ವಿಳಂಬಕ್ಕಾಗಿ ಜನರು ಪ್ರಶ್ನೆ ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ವಿರೋಧ ಪಕ್ಷಗಳು ಈ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿವೆ. ಆದಷ್ಟು ಬೇಗ ಪರಿಹಾರ ನೀಡುವಂತೆ ಸಚಿವರು ಮನವಿ ಮಾಡಿದ್ದಾರೆ.

ಪ್ರಧಾನಿ ಮೋದಿ ಅಮೆರಿಕ ಪ್ರವಾಸದ ಬಳಿಕ ನಡೆಯುತ್ತಿರುವ ಕ್ಯಾಬಿನೆಟ್ ಸಭೆ ಇದಾಗಿದ್ದು ನೆರೆ ವಿಚಾರದಲ್ಲಿ ರಾಜ್ಯಗಳಿಗೆ ನೀಡಬೇಕಾದ ಅನುದಾನ, ಆರ್ಥಿಕ ಕುಸಿತ, ಮಹಾರಾಷ್ಟ್ರ, ಹರ್ಯಾಣ ಚುನಾವಣೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

ಕರ್ನಾಟಕದ ಬಿಜೆಪಿ ನಾಯಕರನ್ನು ಜನ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಇಂದು ಕಂದಾಯ ಇಲಾಖೆ ಕಾರ್ಯದರ್ಶಿ ಟಿ.ಕೆ ಅನೀಲ್ ಕುಮಾರ್ ನೇತೃತ್ವದ ನಿಯೋಗ ದೆಹಲಿಗೆ ಆಗಮಿಸಿ ಗೃಹ ಇಲಾಖೆಗೆ ಹಾನಿಯ ಬಗ್ಗೆ ಸ್ಪಷ್ಟೀಕರಣವನ್ನು ನೀಡಿದೆ.

Comments are closed.