ರಾಷ್ಟ್ರೀಯ

ಶೀಘ್ರದಲ್ಲೇ ದೇಶದ 6000 ರೈಲು ನಿಲ್ದಾಣಗಳಿಗೆ ಉಚಿತ ವೈಫೈ ಸೌಲಭ್ಯ

Pinterest LinkedIn Tumblr

ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್, ಇನ್ನು ಕೇವಲ ಎರಡರಿಂದ ಮೂರು ತಿಂಗಳ ಒಳಗೆ ದೇಶದ 6000 ರೈಲು ನಿಲ್ದಾಣಗಳಿಗೆ ವೈಫೈ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಮುಂದುವರಿದು ಮಾತನಾಡಿದ ಅವರು, ಎಲ್ಲಾ ನಿಲ್ದಾಣಗಳಲ್ಲಿ ಸಿಸಿ ಟಿವಿ ಕ್ಯಾಮೆರಾವನ್ನು ಅಳವಡಿಸಲಾಗುವುದು. ಇದರಿಂದ ರೈಲು ಪ್ರಯಾಣಿಕರ ಸುರಕ್ಷತೆ ಹೆಚ್ಚಲಿದೆ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಪಿಯುಷ್ ಗೋಯಲ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಂದೇ ಭಾರತ್ ಎಕ್ಸ್‌ ಪ್ರೆಸ್ ಹೊಸ ರೈಲು ಮಾರ್ಗವನ್ನು ದೇಶಕ್ಕೆ ಸಮರ್ಪಿಸಿದರು. ‌

ಈ ವೇಳೆ ಮಾತನಾಡಿದ ಸಚಿವ ಅಮಿತ್ ಶಾ, ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಿಂದ ಜಮ್ಮು-ಕಾಶ್ಮೀರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

Comments are closed.