ರಾಷ್ಟ್ರೀಯ

ಭಾರಿ ವಿರೋಧದ ನಡುವೆ ಮಧ್ಯಂತರ ನೆರೆಪರಿಹಾರ ಘೋಷಿಸಿದ ಕೇಂದ್ರ

Pinterest LinkedIn Tumblr


ನವದೆಹಲಿ: ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು ಕರ್ನಾಟಕಕ್ಕೆ 1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಜನರ ತೀವ್ರ ಆಕ್ರೋಶವನ್ನು ರಾಜ್ಯ ಸರ್ಕಾರ ಮತ್ತು ರಾಜ್ಯದ ಬಿಜೆಪಿ ಸಂಸದರು ಎದುರಿಸಿದ್ದರು. ಗುರುವಾರ ಟ್ವಿಟರ್​ನಲ್ಲಿ #NotFairModiji, #Stopurarrogancedvs ಎಂಬಿತ್ಯಾದಿ ಹ್ಯಾಷ್ ಟ್ಯಾಗ್ ಬಳಸಿ ಜನ ಆಕ್ರೋಶ ವ್ಯಕ್ತಪಡಿಸಿದ್ದರು.

ಶುಕ್ರವಾರ ಸಂಜೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಕೋಮಾದಲ್ಲಿದೆ ಎಂಬರ್ಥದ ಟ್ವೀಟ್​ಗಳ ಸುರಿಮಳೆ ಆಗಿದೆ. ಇದಕ್ಕಾಗಿ ಜನತೆ #BJPGovtInComa ಹ್ಯಾಷ್ ಟ್ಯಾಗ್ ಬಳಸಿದ್ದಾರೆ.

ಬಿಹಾರ ಪ್ರವಾಹದ ಬಗ್ಗೆ ಪ್ರಧಾನಿ ಟ್ವೀಟ್​ ಮಾಡಿದ ಬಳಿಕ ರಾಜ್ಯದ ಕೆಂಗಣ್ಣಿಗೆ ಬಿಜೆಪಿ ಗುರಿಯಾಗಿತ್ತು. ರಾಜ್ಯದ ವಿರುದ್ಧ ಬಿಜೆಪಿ ಮಲತಾಯಿ ಧೋರಣೆ ತೋರುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ನಡುವೆ ರಾಜ್ಯ ಸರ್ಕಾರ ಪ್ರವಾಹದ ನಷ್ಟ ಕುರಿತು ಸಲ್ಲಿಸಿದ್ದ ವರದಿಯನ್ನು ಇಂದು ಬೆಳಗ್ಗೆ ತಿರಸ್ಕರಿಸಿ ಮತ್ತೊಮ್ಮೆ ಪರಿಶೀಲಿಸಿ ವರದಿ ಸಲ್ಲಿಸಿ ಎಂದು ಹೇಳಿತ್ತು.

Comments are closed.