ರಾಷ್ಟ್ರೀಯ

ಮೋದಿಯಿಂದ ಪಾಕ್ ನ ಕರ್ತಾರ್‌ಪುರ್ ಕಾರಿಡಾರ್ ಉದ್ಘಾಟನೆ

Pinterest LinkedIn Tumblr


ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನದ ಬೃಹತ್ ಯೋಜನೆ ದಿ ಕರ್ತಾರ್‌ಪುರ್ ಕಾರಿಡಾರ್ ಉದ್ಘಾಟನೆ ಮಾಡಲಿದ್ದಾರೆ ಎಂದು ಕೇಂದ್ರ ಸಚಿವೆ ಹರ್​ಸಿಮ್ರತ್​ ಕೌರ್​ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಹರ್​ಸಿಮ್ರತ್​ ಕೌರ್​, ಗುರು ನಾನಕ್ ದೇವ್ ಅವರ ಆಶೀರ್ವಾದದಿಂದ ನವೆಂಬರ್ 8ರಂದು ಕರ್ತಾರ್‌ಪುರ್ ಕಾರಿಡಾರ್ ಯೋಜನೆ ಉದ್ಘಾಟನೆಯಾಗಲಿದ್ದು, ಈ ಮೂಲಕ ಅವರು ಹೊಸ ಇತಿಹಾಸ ಸೃಷ್ಟಿ ಮಾಡಲಿದ್ದಾರೆ. ಈ ಯೋಜನೆಯು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದ್ದಾರೆ.

ಮತ್ತೊಂದು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್‍ನಿಂದ ಕಳೆದ 72 ವರ್ಷಗಳಲ್ಲಿ ಮಾಡಲು ಸಾಧ್ಯವಾಗದ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಈ ಕಾರಿಡಾರ್ ಪಂಜಾಬ್​ನ ಗುರುದಾಸ್​ಪುರದಿಂದ ಪಾಕಿಸ್ತಾನದಲ್ಲಿರುವ ಸಿಖ್​ ತೀರ್ಥಕ್ಷೇತ್ರ ಕರ್ತಾರ್​ಪುರ್​ ಸಾಹಿಬ್​ಗೆ ಸಂಪರ್ಕ ಕಲ್ಪಿಸಲಿದೆ.

ಕರ್ತಾರ್‌ಪುರ್ ಕಾರಿಡಾರ್ ಪಾಕಿಸ್ತಾನದ ಬೃಹತ್ ಯೋಜನೆಯಾಗಿದೆ. ಈ ಯೋಜನೆ ಉದ್ಘಾಟನೆಗೆ ಮುಖ್ಯ ಅತಿಥಿಯನ್ನಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಆಹ್ವಾನಿಸಲಾಗಿತ್ತು. ಅಲ್ಲದೆ ಗುರುನಾನಕ್ ಅವರ 550ನೇ ಜನ್ಮ ದಿನಾಚರಣೆಗಾಗಿ ಕರ್ತಾರ್ಪುರಕ್ಕೆ ಆಗಮಿಸುತ್ತಿರುವ ಸಿಖ್ ಯಾತ್ರಾರ್ಥಿಗಳನ್ನು ಸ್ವಾಗತಿಸಲು ತುಂಬಾ ಸಂತೋಷವಾಗುತ್ತಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ತಿಳಿಸಿತ್ತು.

ಪಾಕಿಸ್ತಾನದಲ್ಲಿರುವ ಗುರುನಾನಕ್ ಅವರ ಅಂತಿಮ ವಿಶ್ರಾಂತಿ ಸ್ಥಳವಾದ ದರ್ಬಾರ್ ಸಾಹಿಬ್‍ಗೆ ಸಂಪರ್ಕ ಕಲ್ಪಿಸಲು ಕರ್ತಾರ್‌ಪುರ್ ಕಾರಿಡಾರ್ ಯೋಜನೆಯನ್ನು ಪಾಕಿಸ್ತಾನ ಆರಂಭಿಸಿದೆ. ಇದಕ್ಕಾಗಿ ಪಾಕಿಸ್ತಾನ ದೊಡ್ಡ ರೀತಿಯಲ್ಲಿ ತಯಾರಿ ನಡೆಸುತ್ತಿದೆ. ಮನಮೋಹನ್ ಸಿಂಗ್ ಅವರು ಸಿಖ್ ಸಮುದಾಯವನ್ನು ಪ್ರತಿನಿಧಿಸುವುದರಿಂದ ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಲು ನಾವು ನಿರ್ಧರಿಸಿದ್ದೇವೆ. ನಾವು ಶೀಘ್ರದಲ್ಲೇ ಅವರಿಗೆ ಆಹ್ವಾನ ಪತ್ರವನ್ನು ಕಳುಹಿಸುತ್ತೇವೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದರು.

ಈ ಆಹ್ವಾನವನ್ನು ಕಾಂಗ್ರೆಸ್ ತಿರಸ್ಕರಿಸಿತ್ತು. ಮನಮೋಹನ್ ಸಿಂಗ್ ಅವರು ಪಾಕ್ ಆಹ್ವಾನವನ್ನು ಸ್ವೀಕರಿಸುವುದಿಲ್ಲ. ಅಷ್ಟೇ ಅಲ್ಲದೆ ಕಾರ್ಯಕ್ರಮದ ಉದ್ಘಾಟನೆಗೂ ತೆರಳುವುದಿಲ್ಲ ಎಂದು ಕಾಂಗ್ರೆಸ್ ಹೇಳಿತ್ತು.

Comments are closed.