
ಭೋಪಾಲ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸ್ವಾಗತ ಕೋರಿ ಬಿಜೆಪಿ ಅಳವಡಿಸಿರುವ ಒಂದು ಫ್ಲೆಕ್ಸ್ ಮಧ್ಯಪ್ರದೇಶ ರಾಜ್ಯ ರಾಜಕೀಯದಲ್ಲಿ ವದಂತಿಗಳ ಬಿರುಗಾಳಿಯನ್ನೇ ಸೃಷ್ಟಿಸಿದೆ.
ಸಿಂಧಿಯಾ ಅವರು ಬಿಂಡ್ ಜಿಲ್ಲೆಯ ಭೇಟಿಯ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ಈ ಪ್ಲೆಕ್ಸ್ ಹಾಕಿಸಿದ್ದರು. ಸಿಂಧಿಯಾ ಅವರ ಜೊತೆಗೆ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿತ್ರಗಳು ಅದರಲ್ಲಿ ರಾರಾಜಿಸಿದ್ದವು.
ಸಂವಿಧಾನದ 370 ನೇ ವಿಧಿ ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿ ಸ್ಥಳೀಯ ಬಿಜೆಪಿ ಮುಖಂಡ ಹೃದ್ಯೇಶ್ ಶರ್ಮಾ ಈ ಪ್ಲೆಕ್ಸ್ ಅಳವಡಿಸಿದ್ದರು.
Comments are closed.