ರಾಷ್ಟ್ರೀಯ

ಶಾಲಾ ಆವರಣದಲ್ಲಿ ಟ್ಯೂಷನ್ ಅಥವಾ ಕೋಚಿಂಗ್ ನೀಡಿದರೆ ಕಾನೂನು ಕ್ರಮ

Pinterest LinkedIn Tumblr

ನವದೆಹಲಿ : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಶಾಲಾ ಆವರಣದಲ್ಲಿ ಟ್ಯೂಷನ್ ಅಥವಾ ಕೋಚಿಂಗ್ ತರಗತಿಗಳನ್ನು ನಡೆಸುವುದನ್ನು ಕಡ್ಡಾಯವಾಗಿ ನಿರ್ಬಂಧ ಹೇರಿದೆ. ಒಂದು ವೇಳೆ ಇಂತಹ ನಿಯಮ ಮೀರಿ ಕೋಚಿಂಗ್ ನಡೆಸಿದ್ದೇ ಆದಲ್ಲಿ ಅಂತಹ ಶಿಕ್ಷಣ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಗಸುವುದಾಗಿ ತಿಳಿಸಿದೆ.

ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿ, ಮಾತನಾಡಿದ ಕೇಂದ್ರೀಯ ಪ್ರೌಢ ಶಕ್ಷಣ ಮಂಡಳಿ (ಸಿಬಿಎಸ್‌ಇ) ಕಾರ್ಯದರ್ಶಿ ಅನುರಾಗ್ ತ್ರಿಪಾಠಿ, ಶಾಲಾ ಕಟ್ಟಡ ಮತ್ತು ಮೂಲ ಸೌಕರ್ಯಗಳನ್ನು ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಗೆ ಮಾತ್ರ ಬಳಸಿಕೊಳ್ಳಬೇಕು. ಇದಕ್ಕೆ ಮಾತ್ರ ಸರ್ಕಾರದಿಂದ ಅವಕಾಶ ಕಲ್ಪಿಸಲಾಗಿದೆಯೇ ಹೊರತು, ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅಲ್ಲ ಎಂದು ಖಡಕ್ ಆಗೇ ಸೂಚಿಸಿದೆ.

ಅಂದ ಹಾಗೇ ಶಾಲೆಗಳಿಗೆ ಮಾನ್ಯತೆ ನೀಡುವುದಕ್ಕೆ ಮುನ್ನವೇ ಈ ಬಗ್ಗೆ ಬೈಲಾಗಳಲ್ಲಿ ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದು ಹೇಳಿರುವ ಸಿಬಿಎಸ್‌ಇ, ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಈಗಾಗಲೇ ಸುತ್ತೋಲೆ ಹೊರಡಿಸಿದೆ. ಒಂದು ವೇಳೆ ಇಂತಹ ನಿಯಮ ಮೀರಿದರೇ, ಬೈಲಾದಂತೆ ಷರತ್ತನ್ನು ಉಲ್ಲಂಘಿಸಿದ್ದೇ ಆದ್ರೇ, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಗೆ ನೀಡಿದ್ದಾರೆ.

Comments are closed.