ರಾಷ್ಟ್ರೀಯ

ಮುಲಾಯಂ ಸಿಂಗ್ ಯಾದವ್ ವಿರುದ್ಧದ ಪ್ರಕರಣ ಹಿಂಪಡೆಯಲು ಮುಂದಾದ ಮಾಯಾವತಿ

Pinterest LinkedIn Tumblr


ಲಕ್ನೋ: 1995 ರ ರಾಜ್ಯ ಅತಿಥಿಗೃಹದ ಘಟನೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಹಿಂಪಡೆಯಲು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಬಿಎಸ್‌ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ, 1995 ರ ಮುಲಾಯಂ ಸಿಂಗ್ ವಿರುದ್ಧದ ಪ್ರಕರಣವನ್ನು ಹಿಂಪಡೆಯಲು ತಮ್ಮ ಪಕ್ಷದ ಮುಖ್ಯಸ್ಥರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು ಎಂದು ಸ್ಪಷ್ಟಪಡಿಸಿದರು. ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇನ್ನೂ ಬಾಕಿ ಇದೆ ಎಂದು ಮತ್ತೊಬ್ಬ ಬಿಎಸ್‌ಪಿ ಮುಖಂಡ ತಿಳಿಸಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯ ವಕ್ತಾರ ರಾಜೇಂದ್ರ ಚೌಧರಿ ಮಾತನಾಡಿ, “ಮಾಯಾವತಿಯವರು ಮುಲಾಯಂ ಸಿಂಗ್ ಅವರ ಪ್ರಕರಣವನ್ನು ಹಿಂಪಡೆಯುವುದಾಗಿ ತಿಳಿಸಿದ್ದರು. ಆದರೆ ಈವರೆಗೂ ಯಾವುದೇ ವಿವರ ಲಭ್ಯವಾಗಿಲ್ಲ. ಈ ಬಗ್ಗೆ ಮಾಹಿತಿ ಪಡೆದು ಪ್ರತಿಕ್ರಿಯಿಸುತ್ತೇನೆ” ಎಂದು ತಿಳಿಸಿದರು.

ಮೂಲಗಳ ಪ್ರಕಾರ, ಲೋಕಸಭಾ ಚುನಾವಣೆಗೆ ಮುನ್ನ ಅಖಿಲೇಶ್ ಯಾದವ್ ಅವರು ತಮ್ಮ ತಂದೆಯ ವಿರುದ್ಧದ 24 ವರ್ಷದ ಪ್ರಕರಣವನ್ನು ಹಿಂಪಡೆಯುವಂತೆ ಕೋರಿದ್ದರು ಎಂದು ಮಾಯಾವತಿ ಗುರುವಾರ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ.

ಈ ಬಗ್ಗೆ ಪರಿಶೀಲನೆ ನಡೆಸಲು ಪಕ್ಷದ ರಾಜ್ಯಸಭಾ ಸಂಸದ ಸತೀಶ್ ಮಿಶ್ರಾ ಅವರನ್ನು ಕೇಳಿಕೊಂಡಿರುವುದಾಗಿ ಮಾಯಾವತಿ ತಿಳಿಸಿದ್ದಾರೆ ಎನ್ನಲಾಗಿದೆ.

ಏನಿದು ಪ್ರಕರಣ?
ಎಸ್‌ಪಿ-ಬಿಎಸ್‌ಪಿ ಸಮ್ಮಿಶ್ರ ಸರ್ಕಾರ ಉತ್ತರಪ್ರದೇಶದಲ್ಲಿ ಅಧಿಕಾರದಲ್ಲಿದ್ದಾಗ 1995 ರ ಜೂನ್ 2 ರಂದು ರಾಜ್ಯ ಅತಿಥಿಗೃಹದ ಘಟನೆ ನಡೆದಿದೆ.

Comments are closed.