
ನವದೆಹಲಿ:ರಾಮಜನ್ಮಭೂಮಿ-ಬಾಬ್ರಿ ಮಸೀದಿಯ 2.77ಎಕರೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಪಂಚಸದಸ್ಯ ಸಾಂವಿಧಾನಿಕ ಪೀಠ ಶನಿವಾರ ಪ್ರಕಟಿಸಿರುವ ತೀರ್ಪಿಗೆ ಸುನ್ನಿ ವಕ್ಫ್ ಬೋರ್ಡ್ ವಕೀಲ ಝಾಫ್ರಾಯಾಬ್ ಜಿಲಾನಿ ಪ್ರತಿಕ್ರಿಯೆ ನೀಡಿದ್ದು, ನಾವು ತೀರ್ಪನ್ನು ಗೌರವಿಸುತ್ತೇವೆ. ಆದರೆ ತೀರ್ಪಿನ ಬಗ್ಗೆ ತೃಪ್ತಿ ಇಲ್ಲ ಎಂದು ತಿಳಿಸಿದ್ದಾರೆ.
ಅಯೋಧ್ಯೆ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ತೀರ್ಪನ್ನು ಪರಿಶೀಲನೆ ನಡೆಸಿದ ನಂತರ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಅಯೋಧ್ಯೆ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಲ್ಲಿ ಬಹಳಷ್ಟು ಸಂಗತಿಗಳನ್ನು ಒಪ್ಪಲು ಸಾಧ್ಯವಿಲ್ಲ. ಇದನ್ನು ನ್ಯಾಯ ಅಂತ ಒಪ್ಪಲು ಸಾಧ್ಯವಿಲ್ಲ. ಮಸೀದಿ ನಿರ್ಮಾಣಕ್ಕೆ ಬೇರೆ ಕಡೆ ಜಾಗ ನೀಡಿದ್ದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Comments are closed.