
ನವದೆಹಲಿ: ರಾಮಜನ್ಮಭೂಮಿ-ಬಾಬ್ರಿ ಮಸೀದಿಗೆ ಸಂಬಂಧಿಸಿದ 2.77 ಎಕರೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸಿಜೆಐ ರಂಜನ್ ಗೋಗೊಯಿ ನೇತೃತ್ವದ ಪಂಚಸದಸ್ಯ ಸಾಂವಿಧಾನಿಕ ಪೀಠ ಐತಿಹಾಸಿಕ ತೀರ್ಪನ್ನು ಓದುತ್ತಿದ್ದು, ಇನ್ನು ಅರ್ಧ ಗಂಟೆಯಲ್ಲಿ ಪೂರ್ಣ ತೀರ್ಪು ಘೋಷಣೆಯಾಗಲಿದೆ.
134 ವರ್ಷಗಳಲ್ಲಿ ನಾನಾ ಹಂತದ ನ್ಯಾಯಾಲಯಗಳಳ್ಲಿ ವಿಚಾರಣೆಗೆ ಗುರಿಯಾಗಿದ್ದ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದದ ಕುರಿತು ಐವರು ಜಸ್ಟೀಸ್ ಗಳು ತೀರ್ಪನ್ನು ಘೋಷಿಸಲಿದ್ದಾರೆ.
ಸಾಂವಿಧಾನಿಕ ಪೀಠದ ತೀರ್ಪಿನಲ್ಲೇನಿದೆ?
134 ವರ್ಷಗಳ ಹಳೆಯ ರಾಮಜನ್ಮಭೂಮಿ, ಬಾಬ್ರಿ ಮಸೀದಿ ಭೂ ವಿವಾದದ ಕುರಿತಂತೆ ಸಿಜೆಐ ರಂಜನ್ ಗೋಗೊಯಿ ನೇತೃತ್ವದ ಐವರು ನ್ಯಾಯಮೂರ್ತಿಗಳು ನೀಡಿದ ತೀರ್ಪಿನ ಹೈಲೈಟ್ಸ್:
*ನಿರ್ಮೋಹಿ ಅಖಾಡದ ಅರ್ಜಿ ವಜಾ. ಶಿಯಾ ವಕ್ಫ್ ಬೋರ್ಡ್ ಅರ್ಜಿ ಕೂಡಾ ವಜಾ. ರಾಮಲಲ್ಲಾ ಮುಖ್ಯ ಅರ್ಜಿದಾರ ಎಂದು ಮಾನ್ಯತೆ.
*ನಿರ್ಮೋಹಿ ಅಖಾಡಕ್ಕೆ ಪೂಜಾ ಅಧಿಕಾರವಿಲ್ಲ. ಕಂದಾಯ ದಾಖಲೆ ಪ್ರಕಾರ ಇದು ವಿವಾದಿತ ಜಮೀನು ಸರ್ಕಾರಿ ಜಾಗವಾಗಿತ್ತು.
*ಮಸೀದಿ ಅಡಿಪಾಯದ ಕೆಳಗೆ ವಿಶಾಲ ರಚನೆ ಇತ್ತು ಆದರೆ ಇದು ಇಸ್ಲಾಂ ರಚನೆಯಾಗಿರಲಿಲ್ಲ. ಆದರೆ ಮಂದಿರ ಒಡೆದು ಮಸೀದಿ ಕಟ್ಟಲಾಗಿದೆ ಎನ್ನುವ ಅಂಶದ ಕುರಿತು ಖಚಿತತೆ ಇಲ್ಲ.
*ಉತ್ಖನನದ ವೇಳೆ ಸಿಕ್ಕ ಕುರುಹುಗಳು ಇಸ್ಲಾಂ ರಚನೆಯಾಗಿರಲಿಲ್ಲ. ರಾಮ ಅಯೋಧ್ಯೆಯಲ್ಲೇ ಹುಟ್ಟಿದ ಎಂಬ ಬಗ್ಗೆ ವಿವಾದವಿಲ್ಲ.
*ಕೇವಲ ನಂಬಿಕೆಯಿಂದ ಹಕ್ಕನ್ನು ಸಾಬೀತು ಮಾಡಲು ಸಾಧ್ಯವಿಲ್ಲ. ಕಾನೂನಿನ ಆಧಾರದ ಮೇಲೆ ಭೂಮಿಯ ಹಕ್ಕನ್ನು ನಿರ್ಧರಿಸಲಾಗುತ್ತದೆ.
*ಮಸೀದಿ ಕೆಳಗೆ ಇರೋದು ಹಿಂದು ರಚನೆ ಎಂದು ನಂಬಲು ಸಾಧ್ಯವಿಲ್ಲ. ವಿವಾದಿತ ಜಾಗದಲ್ಲಿ ಹಿಂದೂ-ಮುಸ್ಲಿಂ ಇಬ್ಬರೂ ಪೂಜೆ ಸಲ್ಲಿಸುತ್ತಿದ್ದರು.
*ಮಸೀದಿಯ ಮುಖ್ಯ ಗುಂಬಝ್ ಕೆಳ ಭಾಗದಲ್ಲಿ ಗರ್ಭ ಗುಡಿ ಇತ್ತೆಂದು ನಂಬಲಾಗುತ್ತಿದೆ.
*ಮುಸ್ಲಿಮರಿಗೆ ಒಳಭಾಗದಲ್ಲಿ ಪ್ರಾರ್ಥನೆಗೆ ಅವಕಾಶ ಇರದಿದ್ದರು, ಪ್ರಾರ್ಥನೆ ಮಾಡುತ್ತಿದ್ದರು.
*ಮಸೀದಿಯ ಒಳಭಾಗದಲ್ಲಿಯೂ ವಿವಾದ ಇದೆ. ಮಸೀದಿಗೆ ಹಾನಿ ಮಾಡಿದ್ದು ಕಾನೂನಿನ ಉಲ್ಲಂಘನೆ
*ವಿವಾದಿತ ಜಾಗ ಮೂರು ಭಾಗ ಮಾಡಿರೋದು ಸರಿ ಎಂದು ಯಾರೂ ಒಪ್ಪುತ್ತಿಲ್ಲ.
Comments are closed.