ರಾಷ್ಟ್ರೀಯ

ತೀರ್ಪು ತೃಪ್ತಿ ನೀಡಿಲ್ಲ : ಸುನ್ನಿ ವಕ್ಫ್‌ ಬೋರ್ಡ್‌

Pinterest LinkedIn Tumblr


ಹೊಸದಿಲ್ಲಿ: ಐತಿಹಾಸಿಕ ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ ಅಂತಿಮ ಘಟ್ಟ ತಲುಪಿದ್ದು. ಅಂತಿಮ ತೀರ್ಪು ಪ್ರಕಟಗೊಂಡಿದೆ. ಈ ಕುರಿತು ಸುನ್ನಿ ವಕ್ಫ್ ಬೋರ್ಡ್‌ನಿಂದ ಅಸಮಾಧಾನ ವ್ಯಕ್ತವಾಗಿದೆ.

ನಾವು ಸುಪ್ರೀಂ ಕೋರ್ಟ್‌ ತೀರ್ಪನ್ನು ಗೌರವಿಸುತ್ತೇವೆ. ಆದರೆ ಈ ತೀರ್ಪು ನಮಗೆ ತೃಪ್ತಿ ತಂದಿಲ್ಲ. ಮುಂದೆ ಏನು ಮಾಡಬಹುದು ಎಂಬುದನ್ನು ನಿರ್ಧಸರಿಸಲಾಗುವುದು ಎಂದು ಸುನ್ನಿ ವಕ್ಫ್‌ ಬೋರ್ಡ್‌ ವಕೀಲ ಝಾಫರ್ ಆಯಾಬ್‌ ಜಿಲಾನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುನ್ನಿ ವಕ್ಫ್ ಬೋರ್ಡ್‌ಗೆ ಪ್ರತ್ಯೇಕ ಜಾಗ ಭೂಮಿ ನೀಡಿವಂತೆ ಸೂಪ್ರೀಂ ಕೋರ್ಟ್‌ ಸೂಚಿಸಿದೆ. ಆದರೆ, ಮಸೀದಿ ನಿರ್ಮಾಣಕ್ಕೆ ಬೇರೊಂದು ಜಾಗದಲ್ಲಿ ಪರ್ಯಾಯ ಭೂಮಿ ನೀಡುತ್ತಿರುವುದು ಸರಿಯಲ್ಲ. ತೀರ್ಪನ್ನು ಪೂರ್ಣವಾಗಿ ಪರಿಶೀಲಿಸಿ, ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ನಿರ್ಧರಿಸಲಾಗುವುದು ಎಂದು ವಕೀಲ ಜಿಲಾನಿ ತಿಳಿಸಿದ್ದಾರೆ.

Comments are closed.