ರಾಷ್ಟ್ರೀಯ

ಬುಲ್ ಬುಲ್ ಚಂಡಮಾರುತ ಆರ್ಭಟಕ್ಕೆ ಹಲವಡೆಗೆ ಭೂಕುಸಿತ ಮತ್ತು ಆಸ್ತಿ, ಬೆಳೆಗಳಿಗೆ ಹಾನಿ

Pinterest LinkedIn Tumblr

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬುಲ್ ಬುಲ್ ಚಂಡಮಾರುತ ಆರ್ಭಟ ಜೋರಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ, ಹಲವಡೆಗೆ ಭೂಕುಸಿತ ಉಂಟಾಗಿದೆ.

ಬುಲ್ ಬುಲ್ ಚಂಡಮಾರುತದ ಪರಿಣಾಮ ಕೋಲ್ಕತಾದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕೋಲ್ಕತಾ ಕ್ರಿಕೆಟ್ ಮತ್ತು ಫುಟ್ ಬಾಲ್ ಕ್ಲಬ್ ವೊಂದರಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಮರ ಬಿದ್ದು, ಇಬ್ಬರು ವ್ಯಕ್ತಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಬುಲ್ ಬುಲ್ ಚಂಡಮಾರುತ ಗಂಟೆಗೆ 110ರಿಂದ 120 ಕಿಮೀ ವೇಗದಲ್ಲಿ ಚಂಡಮಾರುತ ಬೀಸುತ್ತಿದೆ. ಭಾರೀ ಮಳೆಯಿಂದಾಗಿ ಪಶ್ಚಿಮ ಬಂಗಾಳದ ಜಗತ್ ಸಿಂಗ್ ಪುರ, ಕೇಂದ್ರಪಾರ, ಭದ್ರಕ್ ಮತ್ತು ಬಲಸೋರ್ ಜಿಲ್ಲೆಗಳಲ್ಲಿ ಸಾರ್ವಜನಿಕ ಆಸ್ತಿ ಮತ್ತು ಬೆಳೆಗಳಿಗೆ ಹಾನಿಯುಂಟಾಗಿದೆ.

ಒಡಿಸ್ಸಾ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಮುನ್ನೆಚ್ಚರಿಕಾ ಕ್ರಮವಾಗಿ ಹೈಅಲರ್ಟ್ ಘೋಷಣೆ ಮಾಡಿವೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದ್ದು, ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರೊಂದಿಗೆ ಮಾತುಕತೆ ನಡೆಸಿದ್ದು, ಪರಿಸ್ಥಿತಿಯನ್ನು ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

Comments are closed.