
ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಬಿಜೆಪಿ – ಶಿವಸೇನೆ ಸಂಬಂಧ ಹಳಸುತ್ತಿದ್ದಂತೆ ಅದರ ಪ್ರಭಾವ ಕೇಂದ್ರದ ಮೈತ್ರಿಗೂ ತಟ್ಟತೊಡಗಿದೆ. ಅತ್ತ ಶಿವಸೇನೆ, ಶರದ್ ಪವಾರ್ ನೇತೃತ್ವದ ಎನ್ ಸಿಪಿ ಜೊತೆಗೆ ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಮಾಡಲು ಸಿದ್ದವಾಗುತ್ತಿದ್ದಂತೆ ಶಿವಸೇನಾ ಸಂಸದ ಅರವಿಂದ್ ಸಾವಂತ್ ತನ್ನ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕೇಂದ್ರ ಬ್ರಹತ್ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ಯಮ ಸಚಿವರಾಗಿರುವ ಅರವಿಂದ್ ಸಾವಂತ್ ಅವರು ನರೇಂದ್ರ ಮೋದಿ ಸಂಪುಟದಿಂದ ಹೊರಬರುವ ನಿರ್ಧಾರ ಮಾಡಿದ್ದಾರೆ.
Comments are closed.