
ಕೋಲ್ಕತಾ/ಢಾಕಾ: ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಬುಲ್ ಬುಲ್ ಸೈಕ್ಲೋನ್ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ ಮತ್ತು ಒಡಿಶಾದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ ಎಂದು ವರದಿ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಬುಲ್ ಬುಲ್ ಚಂಡಮಾರುತ 100 ಕಿಲೋ ಮೀಟರ್ ವೇಗದಲ್ಲಿ ಅಪ್ಪಳಿಸಿದ ಪರಿಣಾಮ ನೂರಾರು ಮರಗಳು ಧರೆಗುರುಳಿದೆ. ದಾಖಲೆಯ 20ಮಿಲಿ ಮೀಟರ್ ನಷ್ಟು ಮಳೆಯಾಗಿರುವುದಾಗಿ ವರದಿ ವಿವರಿಸಿದೆ.
ಚಂಡಮಾರುತದ ಹೊಡೆತದಿಂದ ಕೋಲ್ಕತಾದಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ಥವಾಗಿದ್ದು, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಂಟ್ರೋಲ್ ರೂಂಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿರುವುದಾಗಿ ತಿಳಿಸಿದೆ.
3 ಸಾವಿರಕ್ಕೂ ಅಧಿಕ ಮನೆಗಳು ಸಂಪೂರ್ಣವಾಗಿ, 26 ಸಾವಿರ ಮನೆಗಳು ಭಾಗಶಃವಾಗಿ ನಾಶವಾಗಿದೆ. 2 ಲಕ್ಷ ಮಂದಿ ನಿರಾಶ್ರಿತರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ವರದಿ ಹೇಳಿದೆ.
Comments are closed.