ಮೋತಿಹಾರಿ: ಅಡುಗೆ ಮನೆಯಲ್ಲಿದ್ದ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಮೂವರು ಮೃತಪಟ್ಟಿದ್ದು, ಅನೇಕರು ಗಾಯಗೊಂಡ ಘಟನೆ ಬಿಹಾರದ ಸಗೌಲಿಯ ಎನ್ಜಿಒ ಒಂದರಲ್ಲಿ ನಡೆದಿದೆ.
ನವ ಪ್ರಯಾಸ ಸಂಸ್ಥಾ ಎಂಬ ಎನ್ಜಿಒದಲ್ಲಿ ಮಧ್ಯಾಹ್ನದ ಊಟ ತಯಾರಿಸುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತಪಟ್ಟವರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಬಿಹಾರ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಹಾಗೇ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನೂ ಸರ್ಕಾರವೇ ಭರಿಸುವುದಾಗಿ ತಿಳಿಸಿದೆ.
ವರದಿಯ ಪ್ರಕಾರ ಇನ್ನೂ ನಾಲ್ವರ ಸ್ಥಿತಿ ಗಂಭೀರವಾಗಿದೆ. ಪೊಲೀಸ್, ಅಗ್ನಿಶಾಮಕರ ದಳದ ಅಧಿಕಾರಿಗಳು ಸ್ಥಳದಲ್ಲಿ ಇದ್ದು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಾಯ್ಲರ್ ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

Comments are closed.