ಇಂದೋರ್: ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಮೊದಲನೇ ಪಂದ್ಯದಲ್ಲಿ ಅದ್ಭುತ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ.
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಟ್ಟಿಯಲ್ಲಿ (WTC) 300 ಅಂಕಗಳಿಸಿದ ವಿಶ್ವದ ಮೊದಲ ತಂಡ ಎಂಬ ಕೀರ್ತಿಗೆ ಭಾರತ ಭಾಜನವಾಗಿದೆ. ನಿರಂತರವಾಗಿ 6 ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಭಾರತ ಈ ದಾಖಲೆಗೆ ಪಾತ್ರವಾಗಿದೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಟ್ಟಿಯಲ್ಲಿ 2 ಮತ್ತು 3ನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ (60) ಹಾಗೂ ಶ್ರೀಲಂಕಾಗಿಂತ (60) ಭಾರತ 240 ಅಂಕಗಳ ಮುನ್ನಡೆ ಹೊಂದಿದೆ.
ಮಧ್ಯಪ್ರದೇಶದ ಇಂದೋರ್ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 130 ರನ್ ಅಂತರದಿಂದ ಪ್ರವಾಸಿ ಬಾಂಗ್ಲಾ ವಿರುದ್ಧ ಶನಿವಾರ ಜಯ ಗಳಿಸಿತು.
Comments are closed.