ರಾಷ್ಟ್ರೀಯ

ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ನ.30 ರಂದು ಕಾಂಗ್ರೆಸ್‌ನಿಂದ ದೇಶವ್ಯಾಪಿ ಪ್ರತಿಭಟನೆ

Pinterest LinkedIn Tumblr

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಕಾಂಗ್ರೆಸ್ ದೇಶವ್ಯಾಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ರಾಜ್ಯ ಮಟ್ಟದಲ್ಲಿ ಪ್ರತಿಭಟನೆಗಳಿಗೆ ಕರೆ ನೀಡಿರುವ ಕಾಂಗ್ರೆಸ್ ನ.30 ರಂದು ನವದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಭಾರತ್ ಬಚಾವೋ ರ್ಯಾಲಿ ಹಮ್ಮಿಕೊಳ್ಳುವುದಾಗಿ ಘೋಷಿಸಿದೆ.

ಇಲ್ಲಿವರೆಗೆ ದೇಶದ ವಿವಿಧ ಭಾಗಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾ ಮೆರವಣಿಗೆಯನ್ನು ಕಾಂಗ್ರೆಸ್ ಪಕ್ಷ ನಡೆಸಿತ್ತು, ನ.25 ವರೆಗೆ ಎಲ್ಲಾ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಪ್ರತಿಭಟನೆಯನ್ನು ಪೂರ್ಣಗೊಳಿಸುವುದಾಗಿ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಾಧ್ಯಮಗಳಿಗೆ ಹೇಳಿದ್ದಾರೆ.

Comments are closed.