ರಾಷ್ಟ್ರೀಯ

ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವು

Pinterest LinkedIn Tumblr


ಮಧ್ಯಪ್ರದೇಶ: ಕಾರೊಂದು ಮತ್ತೊಂದು ಭಾರೀ ವಾಹನಕ್ಕೆ ಗುದ್ದಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿ ಓರ್ವ ಗಂಭೀರ ಗಾಯಗೊಂಡ ಘಟನೆ ಬರ್ವಾನಿ ಜಿಲ್ಲೆಯ ಮಂಡ್ವಾಡ ಗ್ರಾಮದಲ್ಲಿ ನಡೆದಿದೆ.

ಕಾಸ್ರವಾಡ್ ಗ್ರಾಮದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಇವರೆಲ್ಲಾ ಕಾರಿನಲ್ಲಿ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ಮತ್ತೊಂದು ವಾಹನಕ್ಕೆ ಗುದ್ದಿದ ಪರಿಣಾಮ ಭೀಕರ ದುರಂತ ಸಂಭವಿಸಿದೆ.

ಅಂಜಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Comments are closed.