ರಾಷ್ಟ್ರೀಯ

ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಮಾರಾಟಕ್ಕೆ ನಿರ್ಧಾರ: ನಿರ್ಮಲಾ ಸೀತಾರಾಮನ್

Pinterest LinkedIn Tumblr


ನವದೆಹಲಿ: ನಷ್ಟದಲ್ಲಿ ನಡೆಯುತ್ತಿರುವ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಕಂಪನಿಗಳನ್ನು ಮುಂದಿನ ವರ್ಷ ಮಾರ್ಚ್​ನಲ್ಲಿ ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದ ಸಂದರ್ಶನದಲ್ಲಿ ಈ ವಿಷಯ ತಿಳಿಸಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ಕ್ರೋಡೀಕರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಎರಡು ಸಂಸ್ಥೆಗಳನ್ನು ಮಾರಾಟ ಮಾಡಲಿದೆ. ಈ ನಿಟ್ಟಿನಲ್ಲಿ ಹಲವು ಪ್ರಕ್ರಿಯೆಗಳು ಮುಂದುವರೆದಿದ್ದು, ಇದೇ ವರ್ಷ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ಮಾರಾಟದ ಸಂಬಂಧ ಅಂತಾರಾಷ್ಟ್ರೀಯ ರೋಡ್ ಶೋಗಳಲ್ಲಿ ಹೂಡಿಕೆದಾರರಿಂದ ವ್ಯಾಪಕ ಆಸಕ್ತಿ ವ್ಯಕ್ತವಾಗಿದೆ. ಒಂದು ವರ್ಷದ ಹಿಂದೆಯೇ ಮಾರಾಟ ಮಾಡುವ ಪ್ರಕ್ರಿಯೆ ನಡೆದಿತ್ತು. ಆದರೆ, ಅಂದು ಹೂಡಿಕೆದಾರರಿಂದ ಸೂಕ್ತ ಸ್ಪಂದನೆ ದೊರಕದ ಕಾರಣ ಪ್ರಕ್ರಿಯೆ ಸ್ಥಗಿತಗೊಂಡಿತ್ತು ಎಂದು ವಿತ್ತ ಸಚಿವರು ತಿಳಿಸಿದ್ದಾರೆ.

ತೆರಿಗೆ ಸಂಗ್ರಹ ಒತ್ತಡದ ಸ್ಥಿತಿಯಲ್ಲಿ ಈ ಬಂಡವಾಳ ಹಿಂದೆಗೆತ ಕ್ರಮದಿಂದ ಸರ್ಕಾರದ ಆದಾಯ ಹೆಚ್ಚುವ ನಿರೀಕ್ಷೆ ಇದೆ. ಆರ್ಥಿಕ ಹಿಂಜರಿತವನ್ನು ತಡೆಯಲು ಸರ್ಕಾರ ಸಕಾಲದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು, ಹಲವು ವಲಯಗಳು ಒತ್ತಡದಿಂದ ಹೊರಬರುತ್ತಿವೆ ಎಂದರು.

Comments are closed.