ರಾಷ್ಟ್ರೀಯ

ಡಿ.1ರಿಂದ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹದಡಿ ಫಾಸ್ಟ್‌ಟ್ಯಾಗ್ ವ್ಯವಸ್ಥೆ ಜಾರಿಗೆ

Pinterest LinkedIn Tumblr

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಸುಂಕ ಪಾವತಿಸಲು ವಾಹನಗಳು ಸಾಲುಗಟ್ಟಿ ನಿಲ್ಲುವುದನ್ನು ತಪ್ಪಿಸಲು ಹಾಗೂ ಟೋಲ್‌ ಬೂತ್‌ಗಳನ್ನು ಕ್ಯಾಶ್‌ಲೆಸ್‌ ಆಗಿಸಲು ಕೇಂದ್ರ ಸರ್ಕಾರ ಡಿ.1ರಿಂದ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದ್ದು, ಇನ್ಮುಂದೆ ನಿಮ್ಮ ವಾಹನದಲ್ಲಿ ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ದುಬಾರಿ ದಂಡ ತೆರಬೇಕಾಗುತ್ತದೆ.

ಹೀಗಾಗಿ ಎಲ್ಲಾ ವಾಹನಗಳು ಕಡ್ಡಾಯವಾಗಿ ಫಾಸ್ಟ್‌ ಟ್ಯಾಗ್ ಅಳವಡಿಸಿಕೊಂಡು ಟೋಲ್ ಪಾವತಿಸಬೇಕಾಗುತ್ತದೆ.ಹೊಸ ವ್ಯವಸ್ಥೆಯನ್ನು ಸುಸೂತ್ರವಾಗಿ ದೇಶಾದ್ಯಂತ ಜಾರಿಗೆ ತರಲು ಕೇಂದ್ರ ಸರ್ಕಾರ ತನ್ನ ಅಧಿಕಾರಿಗಳನ್ನು ಎಲ್ಲಾ ರಾಜ್ಯಗಳಿಗೂ ನಿಯೋಜಿಸುತ್ತಿದೆ. ಡಿಸೆಂಬರ್ 1ರಿಂದ ಟೋಲ್ ಪಾವತಿಗಳು ರಾಷ್ಟ್ರೀಯ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹದಡಿ ಫಾಸ್ಟ್‌ಟ್ಯಾಗ್ ಮೂಲಕವೇ ನಡೆಯುತ್ತದೆ.

ಫಾಸ್ಟ್‌ಟ್ಯಾಗ್ ಕಡ್ಡಾಯವಾದರೂ ಟೋಲ್ ಪ್ಲಾಜಾಗಳಲ್ಲಿ ಒಂದು ಪ್ರವೇಶ ದ್ವಾರವನ್ನು ಹೈಬ್ರಿಡ್ ಆಗಿ ಬಳಸಲಾಗುತ್ತದೆ. ಅಲ್ಲಿ ಫಾಸ್ಟ್‌ಟ್ಯಾಗ್ ಹಾಗೂ ಇತರೆ ವಿಧಾನದಲ್ಲೂ ಟೋಲ್ ಸ್ವೀಕರಿಸಲಾಗುತ್ತದೆ. ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ಡಿಸೆಂಬರ್ 1ರಿಂದ ಶೇ.100ರಷ್ಟು ಜಾರಿಯಾಗುತ್ತದೆ ಎಂದು ಹೆದ್ದಾರಿ ಸಚಿವಾಲಯ ಹೇಳಿದೆ.

ರೇಡಿಯೋ ಫ್ರಿಕ್ವೆನ್ಸಿ ಐಡೆಂಟಿಫಿಕೇಷನ್ ತಂತ್ರಜ್ಞಾನದ ಮೂಲಕ ಟೋಲ್ ಪಾವತಿಸುವ ವಿಧಾನ ವಾಹನಗಳ ಮುಂಬದಿಯ ಗಾಜಿನ ಮೇಲೆ ಫಾಸ್ಟ್‌ಟ್ಯಾಗ್ ಸ್ಟಿಕ್ ಅಂಟಿಸಲಾಗುತ್ತದೆ.

Comments are closed.